ಮೈಸೂರು:ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ತನ್ನ ಪೋಷಕರೊಂದಿಗೆ ಮುಂಬೈಗೆ ತೆರಳಿದ್ದಾಳೆ ಎಂದು ಉನ್ನತ ಮೂಲಗಳು ತಿಳಿಸಿದ್ದು, ಬಂಧಿತ ಆರೋಪಿಗಳ ಫೋಟೋವನ್ನು ಪೊಲೀಸರು ವಾಟ್ಸಪ್ ಮೂಲಕ ಸಂತ್ರಸ್ತೆ ಹಾಗೂ ಆತನ ಸ್ನೇಹಿತನಿಗೂ ಕಳುಹಿಸಿ ಖಚಿತಪಡಿಸಿಕೊಂಡಿದ್ದಾರೆ.
ಐವರು ಆರೋಪಿಗಳನ್ನು ತಮಿಳುನಾಡಿನ ಸತ್ಯಮಂಗಲಂನಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆರೋಪಿಗಳು ದರೋಡೆಗೆ ಹೋಗಿ ಅತ್ಯಾಚಾರ ಮಾಡಿದ್ದಾರೆ ಎನ್ನಲಾಗಿದೆ.
ಈಗಾಗಲೇ ಹಲವು ಪ್ರಕರಣಗಳಲ್ಲಿ ಈ ಗ್ಯಾಂಗ್ ಭಾಗಿಯಾಗಿರುವ ಬಗ್ಗೆ ಸಂಶಯ ವ್ಯಕ್ತವಾಗಿದೆ. ರಸ್ತೆಯಲ್ಲಿ ದರೋಡೆಗೆ ಹೋಗಿದ್ದ ಆರೋಪಿಗಳಿಗೆ ಸಿಕ್ಕಿಬಿದ್ದ ಜೋಡಿಗೆ ಬೆದರಿಸಿ, ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ಮೈಸೂರಿನ ಘಟನೆಗೂ ಮುನ್ನ ನಗರದ ಎರಡ್ಮೂರು ಕಡೆಗಳಲ್ಲಿ ರಾಬರಿ ಮಾಡಿದ್ದರು ಎಂದು ಉನ್ನತ ಮೂಲಗಳು ತಿಳಿಸಿವೆ.
ತಮಿಳುನಾಡಿನಲ್ಲಿ ಬಂಧಿಸಲಾಗಿರುವ ಐವರು ಆರೋಪಿಗಳನ್ನು ಮೈಸೂರಿಗೆ ಕರೆತಂದು ಅಜ್ಞಾತ ಸ್ಥಳದಲ್ಲಿ ಪೊಲೀಸರು ವಿಚಾರಣೆ ಮಾಡುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ:ಮೈಸೂರು ಪ್ರಕರಣದಲ್ಲಿ ಪೊಲೀಸರ ಆಪರೇಷನ್ ಸಕ್ಸಸ್: ಗೃಹ ಸಚಿವ ಆರಗ ಜ್ಞಾನೇಂದ್ರ