ಬೆಂಗಳೂರು :ವರನಟ ಡಾ.ರಾಜ್ ಕುಮಾರ್ ಅವರ 95ನೇ ಹುಟ್ಟುಹಬ್ಬಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ರಾಜ್ಯ ಬಿಜೆಪಿ ನಾಯಕರು ಅಭಿಮಾನ ಪೂರ್ವಕ ನಮನಗಳನ್ನು ಸಲ್ಲಿಕೆ ಮಾಡಿ ಟ್ವೀಟ್ ಮಾಡಿದ್ದಾರೆ. ನಟಸಾರ್ವಭೌಮ, ಕನ್ನಡಿಗರ ಆರಾಧ್ಯ ದೈವ, ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ, ವರನಟ ಡಾ.ರಾಜ್ ಕುಮಾರ್ ಅವರ ಜನ್ಮದಿನದಂದು ಅವರಿಗೆ ಅಭಿಮಾನಪೂರ್ವಕ ನಮನಗಳು.
ಕನ್ನಡ ಹಾಗೂ ಕನ್ನಡಿಗರ ಅಸ್ಮಿತೆಯಾಗಿ, ತೆರೆಯ ಮೇಲೆ ತಮ್ಮ ಅದ್ಭುತ ನಟನೆಯಿಂದ, ತೆರೆಯ ಹಿಂದೆ ತಮ್ಮ ಹೃದಯ ವೈಶಾಲ್ಯತೆಯಿಂದ ಜನಮಾನಸದಲ್ಲಿ ಶಾಶ್ವತವಾಗಿ ಉಳಿದಿರುವ ಡಾ.ರಾಜ್ ಅವರು ಈ ನಾಡು, ನುಡಿಗೆ ಸಲ್ಲಿಸಿದ ಸೇವೆ ಅವಿಸ್ಮರಣೀಯವಾದುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿದ್ದು, ನಾಡು ಕಂಡ ಶ್ರೇಷ್ಠ ಸಾಧಕ ಕಲಾವಿದ. ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ವರನಟ, ಪದ್ಮಭೂಷಣ ಡಾ.ರಾಜ್ ಕುಮಾರ್ ಅವರ ಜಯಂತಿಯಂದು ಅವರಿಗೆ ಅಭಿಮಾನಪೂರ್ವಕ ನಮನಗಳು ಎಂದು ತಿಳಿಸಿದ್ದಾರೆ. ಇನ್ನು ಮುಖ್ಯಮಂತ್ರಿಗಳ ಸಂಪುಟ ಸಹೋದ್ಯೋಗಿಗಳು ರಾಜ್ಯ ಬಿಜೆಪಿ ನಾಯಕರು ಕೂಡ ಡಾ.ರಾಜ್ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾರೆ.
ಡಾ.ರಾಜ್ ಶ್ರೇಷ್ಠ ಕಲಾವಿದರು : ಕಟೀಲ್