ಬೆಂಗಳೂರು:ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದ್ದು, ಹೈಕಮಾಂಡ್ ರಂಗ ಪ್ರವೇಶದ ನಡುವೆಯೂ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.
ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ. ಸದ್ಯ ಬಿ.ಎಸ್.ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿ ಆಗಿದ್ದು, ಮುಂದಿನ ಎರಡು ವರ್ಷ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ. ಇದರಲ್ಲಿ ಯಾವುದೇ ಗೊಂದಲ ಇಲ್ಲ ಎಂದು ತಿಳಿಸಿದರು.