ಕರ್ನಾಟಕ

karnataka

ETV Bharat / city

ಬಿಜೆಪಿ ಸಂಸ್ಥಾಪನಾ ದಿನ: ಏ.6ರಂದು ಪ್ರಧಾನಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ವಿಡಿಯೋ ಕಾನ್ಪೆರೆನ್ಸ್ - Founding Day of Bharatiya Janata Party

ಬಿಜೆಪಿ ಸಂಸ್ಥಾಪನಾ ದಿನದ ಅಂಗವಾಗಿ ಏಪ್ರಿಲ್ 6ರಂದು ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಪೆರೆನ್ಸ್ ಮೂಲಕ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದ್ದಾರೆ.

Narendra Modi and JP Nadda video conference on April 6th
ಏಪ್ರಿಲ್ 6ರಂದು ಪ್ರಧಾನಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ವಿಡಿಯೋ ಕಾನ್ಪರೆನ್ಸ್

By

Published : Apr 4, 2021, 12:24 PM IST

Updated : Apr 4, 2021, 12:30 PM IST

ಬೆಂಗಳೂರು:ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಏಪ್ರಿಲ್ 6ರ ಬೆಳಿಗ್ಗೆ 10.30ಕ್ಕೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಪೆರೆನ್ಸ್ ಮೂಲಕ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದ್ದಾರೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಕೂಡ ಈ ಸಂದರ್ಭದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಕಾರ್ಯಕ್ರಮವನ್ನು www.bjplive.org, twitter.com/BJP4India, facebook.com/BJP4India, youtube.com/BJP4India, www.bjp.org ಸೇರಿ ಮತ್ತಿತರ ಸಾಮಾಜಿಕ ಜಾಲತಾಣಗಳಲ್ಲಿ ನೇರಪ್ರಸಾರ ಮಾಡಲಾಗುವುದು. ಪಕ್ಷದ ಪದಾಧಿಕಾರಿಗಳು, ಮುಖಂಡರು ಮತ್ತು ಕಾರ್ಯಕರ್ತರು ಗರಿಷ್ಠ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪತ್ರಿಕಾ ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.

ಕಟೀಲ್ ಪ್ರಕಟಣೆ:

ಪಕ್ಷದ ಸ್ಥಾಪನಾ ದಿನವಾದ ಏಪ್ರಿಲ್ 6ರಂದು ಸ್ವಚ್ಛತಾ ಕಾರ್ಯಕ್ರಮ, ಏಕ ಬಳಕೆ ಪ್ಲಾಸ್ಟಿಕ್ ತೊರೆಯುವ ಸಂಕಲ್ಪ, ಹಿರಿಯ ನಾಗರಿಕರಿಗೆ ಸನ್ಮಾನ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಗೌರವದಂತಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು. ಜೊತೆಗೆ ಪಕ್ಷದ ಸ್ಥಾಪನೆ, ವಿಕಾಸದ ಹಾದಿಯ ಕುರಿತು ಚರ್ಚಿಸಲಾಗುವುದು.

ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ಅಭಿವೃದ್ಧಿ ಯೋಜನೆಗಳು ಮತ್ತು ಅವುಗಳ ಅನುಷ್ಠಾನದ ಕುರಿತು ಚರ್ಚಿಸಲಾಗುವುದು ಎಂದು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಇದನ್ನೂ ಓದಿ:'ಸಿಎಂ ವಜಾಗೊಳಿಸಿ ಎಂದ ಸಿದ್ದರಾಮಯ್ಯ': ಪ್ರತಿಕ್ರಿಯೆ ನೀಡಲು ಬಿಎಸ್​ವೈ ಹಿಂದೇಟು

Last Updated : Apr 4, 2021, 12:30 PM IST

ABOUT THE AUTHOR

...view details