ಕರ್ನಾಟಕ

karnataka

ETV Bharat / city

ಕೊಮ್ಮಘಟ್ಟದಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆ: ತಡರಾತ್ರಿ ದಿಢೀರ್ ಭೇಟಿ ನೀಡಿ ಪರಿಶೀಲಿಸಿದ ಸಿಎಂ - ಸಿಎಂ ಬಸವರಾಜ ಬೊಮ್ಮಾಯಿ

ಕೊಮ್ಮಘಟ್ಟದಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ತಡರಾತ್ರಿ ಸ್ಥಳಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೊಮ್ಮಘಟ್ಟದಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆ
ಕೊಮ್ಮಘಟ್ಟದಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆ

By

Published : Jun 20, 2022, 6:40 AM IST

ಬೆಂಗಳೂರು: ಇಂದು ಕೊಮ್ಮಘಟ್ಟದಲ್ಲಿ ನಡೆಯಲಿರುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆ ಭಾನುವಾರ ತಡರಾತ್ರಿ ಸ್ಥಳಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಸಚಿವರಾದ ಎಸ್.ಟಿ.ಸೋಮಶೇಖರ್, ಮುನಿರತ್ನ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇಂದು ಶಂಕುಸ್ಥಾಪನೆಯಾಗಲಿರುವ ಬೆಂಗಳೂರು ಉಪನಗರ ರೈಲು ಯೋಜನೆ, ರಾಷ್ಟ್ರೀಯ ಹೆದ್ದಾರಿ ಯೋಜನೆ ಕುರಿತು ಮುಖ್ಯಮಂತ್ರಿಗಳಿಗೆ ಅಧಿಕಾರಿಗಳು ಮಾಹಿತಿ ನೀಡಿದರು. ಇದೇ ವೇಳೆ ಸಿದ್ಧತೆ, ಭದ್ರತೆ ಕುರಿತು ಸಹ ಪರಿಶೀಲನೆ ನಡೆಸಿದರು.

ಕೊಮ್ಮಘಟ್ಟದಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆ

ಪ್ರಧಾನಿ ಇಂದು ಮಧ್ಯಾಹ್ನ 2.45 ಕ್ಕೆ ಬೆಂಗಳೂರಿನ ಕೊಮ್ಮಘಟ್ಟದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಹಾಗೂ ಕೆಲ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

ಇದನ್ನೂ ಓದಿ:ಅಗ್ನಿವೀರರು 4 ವರ್ಷದ ಸೇವೆ ನಂತರ ನಮ್ಮ ಪಕ್ಷದ ಕಚೇರಿಯಲ್ಲಿ ಸೆಕ್ಯುರಿಟಿ ಆಗಬಹುದು: ಕೈಲಾಶ್ ವಿಜಯವರ್ಗಿಯಾ

ABOUT THE AUTHOR

...view details