ಬೆಂಗಳೂರು: ಬಂಡೆಪಾಳ್ಯ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೋಮ್ ಗಾರ್ಡ್ಗೆ ಕೊರೊನಾ ದೃಢಪಟ್ಟಿದ್ದು, ಈ ಕುರಿತು ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ನಿರ್ಲಕ್ಷ್ಯ ಮನೋಭಾವ ತಾಳಿದ ಕಾರಣ ಕೆಲಹೊತ್ತು ಪೊಲೀಸರು ಹೈರಾಣಾದರು ಎನ್ನಲಾಗಿದೆ.
ಬಿಬಿಎಂಪಿ, ಆರೋಗ್ಯ ಅಧಿಕಾರಿಗಳ ನಿರ್ಲಕ್ಷ್ಯ; ಹೈರಾಣಾದ ಪೊಲೀಸರು - Corona attacked to Home guard
ಸೋಂಕಿತನನ್ನು ಆಸ್ಪತ್ರೆಗೆ ಕರೆದೊಯ್ಯಲು ಆ್ಯಂಬುಲೆನ್ಸ್ಗೆ ಕರೆ ಮಾಡಿದರೂ, ಆರೋಗ್ಯ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ ಕಾರಣ ಬಂಡೆಪಾಳ್ಯ ಪೊಲೀಸ್ ಠಾಣೆ ಸಿಬ್ಬಂದಿ ಕೆಲಹೊತ್ತು ಆತಂಕಕ್ಕೆ ಒಳಗಾದರು ಎನ್ನಲಾಗಿದೆ.

ಬಿಬಿಎಂಪಿ
ಕೊರೊನಾ ಲಕ್ಷಣ ಕಂಡು ಬಂದ ಕಾರಣ ಹೋಮ್ ಗಾರ್ಡ್ ಪರೀಕ್ಷೆ ಮಾಡಿಸಿಕೊಂಡಿದ್ದರು. ಇದೀಗ ಅವರ ವರದಿ ಬಂದಿದ್ದು, ಸೋಂಕಿರುವುದು ಗೊತ್ತಾಗಿದೆ. ತಕ್ಷಣ ಸೋಂಕಿತನನ್ನು ಆಸ್ಪತ್ರೆಗೆ ಕರೆದೊಯ್ಯಲು ಪೊಲೀಸರು ಆ್ಯಂಬುಲೆನ್ಸ್ಗೆ ಕರೆ ಮಾಡಿದರು.
ಆದರೆ, ಆರೋಗ್ಯ ಅಧಿಕಾರಿಗಳು ಸೋಂಕಿತನನ್ನು ಕರೆದುಕೊಂಡು ಹೋಗಲು ವ್ಯವಸ್ಥೆ ಮಾಡದ ಕಾರಣ ಪೊಲೀಸರು ಆತಂಕಕ್ಕೆ ಒಳಗಾದರು. ಬಳಿಕ ಠಾಣೆ ಸಿಬ್ಬಂದಿ ಹಿರಿಯ ಪೊಲೀಸ್ ಅಧಿಕಾರಿಗಳ ಗಮನಕ್ಕೆ ತಂದರು. ಆಗ ಅಧಿಕಾರಿಗಳು ಸಂಬಂಧಿಸಿದ ಇಲಾಖೆಗೆ ಮಾಹಿತಿ ನೀಡಿದರು. ಸದ್ಯ ಸೋಂಕಿತನನ್ನು ಕರೆದೊಯಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ.