ನೆಲಮಂಗಲ: ಕರ್ನಾಟಕ ಬಂದ್ ಕಾವು ಕ್ರಮೇಣವಾಗಿ ಹೆಚ್ಚುತ್ತಿದ್ದು, ನೆಲಮಂಗಲದಲ್ಲಿ ಕನ್ನಡ ಪರ ಸಂಘಟನೆ ಕಾರ್ಯಕರ್ತರು ರಸ್ತೆಯಲ್ಲಿ ಉರುಳು ಸೇವೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.
ನೆಲಮಂಗಲ: ಉರುಳು ಸೇವೆ ಮೂಲಕ ಮರಾಠ ಪ್ರಾಧಿಕಾರ ರಚನೆಗೆ ವಿರೋಧ - ಮಾರಾಠ ಅಭಿವೃದ್ಧಿ ನಿಗಮ
ಮರಾಠ ಅಭಿವೃದ್ಧಿ ನಿಗಮ ಮಾಡಲು ಮುಂದಾಗಿರುವ ಸರ್ಕಾರದ ಧೋರಣೆಯನ್ನು ವಿರೋಧಿಸಿ ಕನ್ನಡ ಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ನೆಲಮಂಗಲದಲ್ಲಿ ಬಂದ್ ಕಾವು ಕ್ರಮೇಣವಾಗಿ ಹೆಚ್ಚುತ್ತಿದೆ.
ತಾಲೂಕಿನ ಅರಿಶಿನಕುಂಟೆಯಲ್ಲಿ ಕರುನಾಡ ವಿಜಯ ಸೇನೆಯ ಕಾರ್ಯಕರ್ತರು ಮುಂಜಾನೆಯಿಂದಲೇ ಪ್ರತಿಭಟನೆ ಆರಂಭಿಸಿದ್ದಾರೆ.
ಈ ವೇಳೆ ಮಾತನಾಡಿದ ಕರುನಾಡ ವಿಜಯ ಸೇನೆಯ ರಾಜ್ಯ ವಕ್ತಾರ, ಎಲ್.ರಾಮ್ ಪ್ರಸಾದ್, ಮರಾಠ ಅಭಿವೃದ್ಧಿ ಪ್ರಾಧಿಕಾರದ ರಚನೆಯನ್ನು ವಿರೋಧಿಸಿ ರಾಜ್ಯಾದ್ಯಂತ ಇಂದು ಪ್ರತಿಭಟಿಸಲಾಗುತ್ತಿದೆ. ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವ ಮೂಲಕ ರಾಜ್ಯದಲ್ಲಿ ಮಲತಾಯಿ ಧೋರಣೆ ಮಾಡುತ್ತಿದೆ. ರಾಜ್ಯದ ವಿವಿಧ ಸಂಘಟನೆಗಳ ಕೆಂಗಣ್ಣಿಗೆ ಕಾರಣವಾಗಿದೆ. ಕೂಡಲೇ ಇದನ್ನು ಹಿಂಪಡೆಯಬೇಕು, ಇಲ್ಲವಾದಲ್ಲಿ ಮುಂದೆ ಇನ್ನಷ್ಟು ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದರು.