ಬೆಂಗಳೂರು: ಪ್ರೀತಿಸಿ ಎರಡು ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಮಹಿಳೆ ಪತಿಯೊಂದಿಗೆ ಜಗಳ ಮಾಡಿ ನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಸುಬ್ರಮಣ್ಯನಗರದಲ್ಲಿ ನಡೆದಿದೆ.
ಭುವನಾ (27), ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದು, ನಗರದ ಪ್ರತಿಷ್ಠಿತ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಚಾಲಕನಾಗಿದ್ದ ಸಾಗರ್ ಎಂಬಾತನನ್ನು ಪ್ರೀತಿಸುತ್ತಿದ್ದ ಈಗ 2 ತಿಂಗಳ ಹಿಂದಷ್ಟೇ ವಿವಾಹವಾಗಿದ್ದಳು.
ಇದನ್ನೂ ಓದಿ:ಇಬ್ಬರು ಮಕ್ಕಳ ಕೊಲೆಗೈದು, ಆತ್ಮಹತ್ಯೆಗೆ ಶರಣಾದ ತಂದೆ
ಸಾಗರ್ ಬೇರೆ ಯುವತಿ ಜತೆ ಸುತ್ತಾಡುತ್ತಿರುವ ಬಗ್ಗೆ ಭುವನಾಗೆ ಅನುಮಾನ ವ್ಯಕ್ತವಾಗಿ ದಂಪತಿ ನಡುವೆ ಜಗಳ ನಡೆಯುತ್ತಿತ್ತು. ಇದರಿಂದ ನೊಂದ ಭುವನಾ ಶನಿವಾರ ಸಂಜೆ 6 ಗಂಟೆಗೆ ಮನೆಯಲ್ಲಿ ಯಾರೂ ಇಲ್ಲದಿರುವ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.