ಬೆಂಗಳೂರು:ನವವಿವಾಹಿತೆಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ನಗರದ ಕೋಣನಕುಂಟೆಯ ಆದರ್ಶ ನಗರದಲ್ಲಿ ನಡೆದಿದೆ.
ನವವಿವಾಹಿತೆ ನೇಣಿಗೆ ಶರಣು: ಗಂಡನ ಕಿರುಕುಳವೇ ಕಾರಣ ಎಂದು ಪೋಷಕರ ಆರೋಪ - Bengaluru suicide news
ಕಳೆದ ಒಂದೂವರೆ ತಿಂಗಳ ಹಿಂದೆಯಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ನವವಿವಾಹಿತೆ ನೇಣಿಗೆ ಶರಣು. ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.
ಪಲ್ಲವಿ (24) ಮೃತಪಟ್ಟ ಮಹಿಳೆ. ಮೂಲತಃ ಬಂಗಾರಪೇಟೆಯ ನಿವಾಸಿಯಾದ ಪಲ್ಲವಿಗೆ ಕಳೆದ ಒಂದೂವರೆ ತಿಂಗಳ ಹಿಂದೆಯಷ್ಟೇ ನವೀನ್ ಎಂಬಾತನೊಂದಿಗೆ ವಿವಾಹವಾಗಿತ್ತು. ಆದರೆ, ನಿನ್ನೆ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಪಲ್ಲವಿ ಮನೆಯವರು ಗಂಡನ ಕಿರುಕುಳ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆರೋಪ ಮಾಡುತ್ತಿದ್ದಾರೆ.
ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಪಲ್ಲವಿ ಗಂಡನ ವಿಚಾರಣೆ ನಡೆಸುತ್ತಿದ್ದಾರೆ.