ಬೆಂಗಳೂರು:ಕೆ.ಜಿ.ಹಳ್ಳಿ ಹಾಗೂ ಡಿ.ಜೆ.ಹಳ್ಳಿ ಗಲಭೆ ಪ್ರಕರಣ ಸಂಬಂಧಪಟ್ಟಂತೆ ಇಂದು ಬೆಳಗ್ಗೆ ಬೆಂಗಳೂರಿನ 7 ಕಡೆ ದಾಳಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಎಸ್ಡಿಪಿಐ, ಪಿಎಫ್ಐ ಕಾರ್ಯಕರ್ತರ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಕೆ.ಜಿ. ಹಳ್ಳಿ, ಡಿ.ಜೆ. ಹಳ್ಳಿ, ಗೋವಿಂದಪುರ ಹಾಗೂ ಥಣಿಸಂದ್ರ ಭಾಗಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದು, ಕೆಲ ಕಾರ್ಯಕರ್ತರ ಮನೆಯಲ್ಲಿ ಪ್ರಚೋದನಕಾರಿ ಬರಹ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.