ಬೆಂಗಳೂರು: ಮಾದಕವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನೈಜೀರಿಯಾ ಮೂಲದ ವ್ಯಕ್ತಿಯನ್ನು ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ನೈಜೀರಿಯಾ ಮೂಲದ ಆಗು ಜೆಮ್‌ಔರಾ ಬಂಧಿತ ಆರೋಪಿಯಾಗಿದ್ದಾನೆ. ಬಂಧಿತನಿಂದ ಸುಮಾರು 11 ಲಕ್ಷ ರೂ ಮೌಲ್ಯದ ಕೊಕೇನ್, ಎಂಡಿಎಂಎ ಮತ್ತು ಕಾರು ವಶಕ್ಕೆ ಪಡೆದಿರುವುದಾಗಿ ಬೈಯಪ್ಪನಹಳ್ಳಿ ಪೊಲೀಸರು ತಿಳಿಸಿದ್ದಾರೆ.
ಕೊಕೇನ್, ಎಂಡಿಎಂಎ ಡ್ರಗ್ಸ್ ಸೇರಿದಂತೆ ಇತರ ಮಾದಕ ವಸ್ತುಗಳನ್ನು ಐಟಿ-ಬಿಟಿ ಉದ್ಯೋಗಿಗಳಿಗೆ ಮಾರಾಟ ಮಾಡುತ್ತಿದ್ದ ಎಂಬ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದಾಳಿ ವೇಳೆ ಸಿಕ್ಕಿ ಬಿದ್ದ ಆರೋಪಿಯನ್ನ ಪೊಲೀಸರು ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ.
ಡ್ರಗ್ಸ್ ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆ ಬಂಧನ: 11 ಲಕ್ಷ ರೂ ಮೌಲ್ಯದ ಮಾದಕ ವಸ್ತು ವಶ - ಕಾರು ವಶಕ್ಕೆ ಪಡೆದಿರುವುದಾಗಿ ಬೈಯಪ್ಪನಹಳ್ಳಿ ಪೊಲೀಸರು
ಐಟಿ-ಬಿಟಿ ಉದ್ಯೋಗಿಗಳಿಗೆ ನೈಜೀರಿಯಾ ಪ್ರಜೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಎಂಬ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಬೆಂಗಳೂರು ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದಾಳಿ ವೇಳೆ ಸಿಕ್ಕಿ ಬಿದ್ದ ಆರೋಪಿಯನ್ನ ಪೊಲೀಸರು ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ.
![ಡ್ರಗ್ಸ್ ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆ ಬಂಧನ: 11 ಲಕ್ಷ ರೂ ಮೌಲ್ಯದ ಮಾದಕ ವಸ್ತು ವಶ ಡ್ರಗ್ಸ್ ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆಯ ಬಂಧನ](https://etvbharatimages.akamaized.net/etvbharat/prod-images/768-512-14111400-1090-14111400-1641457781965.jpg)
Nigerian drug Peddler arrested by Bangalore police