ಕರ್ನಾಟಕ

karnataka

ETV Bharat / city

ಅಧಿಕಾರಾವಧಿ ಸಣ್ಣದಾದರೂ ಸಾಧನೆ ದೊಡ್ಡದು.. ಅಜ್ಜನ ಆಡಳಿತಕ್ಕೆ ನಿಖಿಲ್ ಕುಮಾರಸ್ವಾಮಿ ಶ್ಲಾಘನೆ - hd devegowda prime minister period

ರಾಜಕೀಯದಲ್ಲಿ ಹಲವು ನೋವು-ನಲಿವುಗಳನ್ನು ಕಂಡಿರುವ ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡರ ಪಯಣ ನಮ್ಮಂತ ಯುವ ಪೀಳಿಗೆಗೆ ದಾರಿ ದೀಪ. ಅವರ ಅಧಿಕಾರದ ಅವಧಿ ಸಣ್ಣದಾದರೂ ಮಾಡಿದ ಸಾಧನೆ ದೊಡ್ಡದು ಎಂದು ತಾತನ ಕಾರ್ಯಗಳ ಕುರಿತು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್​ ಕುಮಾರಸ್ವಾಮಿ ಮೆಲುಕು ಹಾಕಿದರು.

nikhil-kumaraswamy-remembered-devegowda-achievements
ನಿಖಿಲ್ ಕುಮಾರಸ್ವಾಮಿ

By

Published : Jun 1, 2021, 4:57 PM IST

ಬೆಂಗಳೂರು: ಮಣ್ಣಿನ ಮಗ, ಕರ್ನಾಟಕದ ಹೆಮ್ಮೆಯ ಸುಪುತ್ರ ಹೆಚ್.ಡಿ. ದೇವೇಗೌಡರು ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ದಿನ ಇದು. ಭರ್ತಿ 25 ವರ್ಷಗಳನ್ನು ಪೂರೈಸಿ ಬೆಳ್ಳಿ ಹಬ್ಬದ ಸಂಭ್ರಮದಲ್ಲಿದ್ದೇವೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ, ನಟ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಅಧಿಕಾರದ ಅವಧಿ ಸಣ್ಣದಾದರೂ ಮಾಡಿದ ಸಾಧನೆ ದೊಡ್ಡದು. ಇಡೀ ದೇಶದಲ್ಲಿ ಐಟಿ ಉದ್ಯಮಕ್ಕೆ 10 ವರ್ಷಗಳ ಕಾಲ‌ ಟ್ಯಾಕ್ಸ್ ಹಾಲಿಡೇ, ಬಾಂಗ್ಲಾದೇಶ ಹಾಗೂ ಭಾರತದ ನಡುವಿನ ಗಂಗಾ ನದಿ ವಿವಾದ ಬಗೆಹರಿಸಿದ್ದು, ಈಶಾನ್ಯದ ಏಳು ರಾಜ್ಯಗಳಿಗೆ ಭೇಟಿ ನೀಡಿ ಒಟ್ಟು 6 ಸಾವಿರ ಕೋಟಿಯ ಪ್ಯಾಕೇಜ್ ಘೋಷಣೆ ಮಾಡಿದ್ದರು ಎಂಬುದನ್ನು ನಿಖಿಲ್​ ನೆನೆದಿದ್ದಾರೆ.

ಅಷ್ಟೆ ಅಲ್ಲದೆ, ಏರ್​ಪೋರ್ಟ್​, ರೈಲ್ವೆ ಯೋಜನೆ ರಾಷ್ಟ್ರೀಯ ಹೆದ್ದಾರಿಗಳು, ವಿಶ್ವವಿದ್ಯಾಲಯಗಳನ್ನು ನಿರ್ಮಿಸಲು ವಿಶೇಷ ಅನುದಾನ ಮಂಜೂರು, ಕಾಶ್ಮೀರಕ್ಕೆ ಐದು ಬಾರಿ ಭೇಟಿ ನೀಡಿ 3 ಸಾವಿರ ಕೋಟಿ ಪ್ಯಾಕೇಜ್, ನೆನೆಗುದಿಗೆ ಬಿದ್ದಿದ್ದ ದೆಹಲಿ ಮೆಟ್ರೋಗೆ ಚಾಲನೆ, ನಾಗಾ ಬಂಡುಕೋರರೊಂದಿಗೆ ಶಾಂತಿ ಮಾತುಕತೆ ನಡೆಸಿ ಯುದ್ಧವಿರಾಮ ಘೋಷಣೆ ಮಾಡಿದ್ರು ಎಂದು ತಿಳಿಸಿದ್ದಾರೆ.

ತವರಿಗೂ ದೇವೇಗೌಡರ ಕೊಡುಗೆ ಅವಿಸ್ಮರಣೀಯ. ರೈಲ್ವೇ, ನೀರಾವರಿ, ವಿದ್ಯುತ್, ಕೈಗಾರಿಕೆ ಸೇರಿದಂತೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ. ರಾಜಕೀಯದಲ್ಲಿ ಹಲವು ನೋವು-ನಲುವುಗಳನ್ನು ಕಂಡಿರುವ ದೇವೇಗೌಡರ ಪಯಣ ನಮ್ಮಂತ ಯುವ ಪೀಳಿಗೆಗೆ ದಾರಿ ದೀಪ ಎಂದು ತಮ್ಮ ಅಜ್ಜನ ಕಾರ್ಯವನ್ನು ನಿಖಿಲ್​ ಕುಮಾರಸ್ವಾಮಿ ಶ್ಲಾಘಿಸಿದ್ದಾರೆ.

ABOUT THE AUTHOR

...view details