ಬೆಂಗಳೂರು: ಮಳೆಯಿಂದ ರಾಜ್ಯದಲ್ಲಿ ಇದುವರೆಗೆ 9 ಜನರು ಸಾವನ್ನಪ್ಪಿದ್ದು, 11 ಜಿಲ್ಲೆಗಳ 45 ತಾಲೂಕುಗಳಲ್ಲಿ ಸಂಕಷ್ಟ ಎದುರಾಗಿದೆ. ಸುಮಾರು 283 ಗ್ರಾಮಗಳಿಗೆ ಮಳೆಯಿಂದ ಭಾರೀ ಹಾನಿ ಸಂಭವಿಸಿವೆ. 36,498 ಜನರು ಪ್ರವಾಹದಿಂದಾಗಿ ಸಮಸ್ಯೆಗೀಡಾಗಿದ್ದು, ಇದುವರೆಗೆ 3 ಜನರು ಕಾಣೆಯಾಗಿರುವ ಬಗ್ಗೆ ವರದಿಯಾಗಿದೆ ಎಂದು ಕಂದಾಯ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಮಳೆಗೆ 134 ಮನೆಗಳು ಸಂಪೂರ್ಣ ಹಾನಿಗೀಡಾಗಿದ್ದು, 2,480 ಮನೆಗಳು ಭಾಗಶ: ಹಾನಿಗೀಡಾಗಿವೆ. 78 ಜಾನುವಾರುಗಳು ಸಾವನ್ನಪ್ಪಿವೆ. ಇದುವರೆಗೆ 31,360 ಜನರನ್ನು ಸ್ಥಳಾಂತರಿಸಲಾಗಿದೆ. 237 ಕಡೆಗಳಲ್ಲಿ ಕಾಳಜಿ ಕೇಂದ್ರಗಳನ್ನು ಆರಂಭಿಸಲಾಗಿದ್ದು, 22,417 ಜನರಿಗೆ ಪರಿಹಾರದ ವ್ಯವಸ್ಥೆ ಮಾಡಲಾಗಿದೆ.