ಬೆಂಗಳೂರು: ಹರ್ ಘರ್ ತಿರಂಗಾ ಅಭಿಯಾನದ ಹಿನ್ನೆಲೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬೆಂಗಳೂರಿನ ಜಯನಗರದಲ್ಲಿ ಪಾದಯಾತ್ರೆ ನಡೆಸಿದರು. ಈ ವೇಳೆ, ಜಯನಗರ ಟಿ ಬ್ಲಾಕ್ನಲ್ಲಿ ಮನೆ ಮನೆಗೆ ತೆರಳಿ ತ್ರಿವರ್ಣ ಧ್ವಜ ನೀಡಿದರು.
ಹರ್ ಘರ್ ತಿರಂಗಾ ಅಭಿಯಾನ.. ಮನೆ ಮನೆಗೆ ತೆರಳಿ ಧ್ವಜ ನೀಡಿದ ನಿರ್ಮಲಾ ಸೀತಾರಾಮನ್ - ರೋಡ್ ಶೋ
75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆ ಹರ್ ಘರ್ ತಿರಂಗಾ ಅಭಿಯಾನದ ನಿಮಿತ್ತ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬೆಂಗಳೂರಿನ ಜಯನಗರದಲ್ಲಿ ಪಾದಯಾತ್ರೆ ನಡೆಸಿ, ಮನೆ ಮನೆಗೆ ತೆರಳಿ ಧ್ವಜ ನೀಡಿದರು.

ನಿರ್ಮಲಾ ಸೀತಾರಾಮನ್
ಇದಕ್ಕೂ ಮುನ್ನ ಶಾಂತಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಬೈಕ್ ರ‍್ಯಾಲಿಗೆ ಚಾಲನೆ ನೀಡಿದ ನಿರ್ಮಲಾ ಸೀತಾರಾಮನ್, ಬಳಿಕ ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿದರು. ಈ ವೇಳೆ, ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಎನ್.ಆರ್. ರಮೇಶ್, ಮಾಜಿ ಕಾರ್ಪೊರೇಟರ್ ಸಿ.ಕೆ. ರಾಮಮೂರ್ತಿ ಸಾತ್ ನೀಡಿದರು.
ಇದನ್ನೂ ಓದಿ:ಸ್ವಾತಂತ್ರ್ಯ ಅಮೃತ ಮಹೋತ್ಸವ.. ಬಳ್ಳಾರಿಯಲ್ಲಿ ತಿರಂಗಾ ಹಿಡಿದು ಜಯಘೋಷ ಕೂಗಿದ ಸಾವಿರಾರು ಮಂದಿ