ಕರ್ನಾಟಕ

karnataka

ETV Bharat / city

ನಿರ್ಮಲಾನಂದನಾಥ ಸ್ವಾಮೀಜಿ ಫೋನ್​​ ಕದ್ದಾಲಿಕೆ: ಹೆಚ್​ಡಿಕೆ ವಿರುದ್ಧ ವಿಜಯೇಂದ್ರ ಕಿಡಿ

ನಿರ್ಮಲಾನಂದನಾಥ ಸ್ವಾಮೀಜಿ ಅವರ ಫೋನ್​ ಕದ್ದಾಲಿಕೆ ಕುರಿತು ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಜಯೇಂದ್ರ, ಮಾಜಿ‌‌ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ.

nirmalanandanath-swamiji-phone-tapping

By

Published : Sep 29, 2019, 6:41 PM IST

ಬೆಂಗಳೂರು:ಆದಿಚುಂಚನಗಿರಿ ಮಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ ಅವರ ಫೋನ್ ಕದ್ದಾಲಿಕೆ‌ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ವಿಜಯೇಂದ್ರ, ಮಾಜಿ‌‌ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ವಿರುದ್ಧ ಟ್ವೀಟ್​​​ ಮೂಲಕ‌ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಜಯೇಂದ್ರ ಟ್ವಿಟರ್​​ನಲ್ಲಿ 'ಸ್ವಾರ್ಥ, ಅಧಿಕಾರಕ್ಕಾಗಿ ಎಷ್ಟು ಕೀಳುಮಟ್ಟಕ್ಕೆ ಇಳಿಯಬಹುದು ಎನ್ನುವುದರಲ್ಲಿ ಕುಮಾರಸ್ವಾಮಿಯವರಿಗೆ ಸರಿಸಾಟಿಯಿಲ್ಲ. ಇಡೀ ದೇಶವೇ ಗೌರವಿಸುವ ಶ್ರೀಗಳ ಫೋನ್ ಕದ್ದಾಲಿಸಿದ್ದು ಮಾತ್ರವಲ್ಲದೆ, ಸ್ಮಗ್ಲರ್​​ಗಳ ಪಟ್ಟಿಯಲ್ಲಿ ಸೇರಿಸಿ ಅಕ್ಷಮ್ಯ ಅಪರಾಧ ಎಸಗಿದ್ದಾರೆ ಎಂದು ಕಿಡಿಕಾರಿದ್ದಾರೆ.
ಕುಮಾರಸ್ವಾಮಿ ಅವರಲ್ಲಿ ಸ್ವಲ್ಪವಾದರೂ ನೈತಿಕತೆ ಉಳಿದಿದ್ದರೆ ಮೊದಲು ಗುರುಗಳ ಕ್ಷಮೆ ಕೇಳಲಿ ಎಂದು ಆಗ್ರಹಿಸಿದ್ದಾರೆ.

ABOUT THE AUTHOR

...view details