ಬೆಂಗಳೂರು:ಅತ್ಯಾಚಾರ ಪ್ರಕರಣದ ಆರೋಪಿ ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮೀಜಿಗೆ ನೀಡಿರುವ ಜಾಮೀನು ರದ್ದುಪಡಿಸುವಂತೆ ಕೋರಿ ಲೆನಿನ್ ಎಂಬುವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ನಿತ್ಯಾನಂದ ಸ್ವಾಮಿಗೆ ನೀಡಿದ್ದ ಜಾಮೀನು ರದ್ದು ಕೋರಿ ಹೈಕೋರ್ಟ್ಗೆ ಅರ್ಜಿ.. - ನಿತ್ಯಾನಂದ ಸ್ವಾಮೀಜಿ ದೇಶ ಬಿಟ್ಟು ಪರಾರಿ
ಈ ಸಂಬಂಧ ನಿತ್ಯಾನಂದ ಸ್ವಾಮೀಜಿ ಹಾಗೂ ರಾಜ್ಯ ಗೃಹ ಇಲಾಖೆಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಆಶ್ರಮದ ಭಕ್ತೆಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಪ್ರಕರಣದಲ್ಲಿ ನಿತ್ಯಾನಂದ ಸ್ವಾಮಿ 2010ರಲ್ಲಿ ಜಾಮೀನು ಪಡೆದಿದ್ದ. ಒಂದೂವರೆ ವರ್ಷದ ಹಿಂದೆಯೇ ನಿತ್ಯಾನಂದ ಸ್ವಾಮಿ ದೇಶ ಬಿಟ್ಟು ಪರಾರಿಯಾಗಿದ್ದಾನೆ.
ಈ ಸಂಬಂಧ ನಿತ್ಯಾನಂದ ಸ್ವಾಮೀಜಿ ಹಾಗೂ ರಾಜ್ಯ ಗೃಹ ಇಲಾಖೆಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಆಶ್ರಮದ ಭಕ್ತೆಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಪ್ರಕರಣದಲ್ಲಿ ನಿತ್ಯಾನಂದ ಸ್ವಾಮಿ 2010ರಲ್ಲಿ ಜಾಮೀನು ಪಡೆದಿದ್ದ. ಒಂದೂವರೆ ವರ್ಷದ ಹಿಂದೆಯೇ ನಿತ್ಯಾನಂದ ಸ್ವಾಮಿ ದೇಶ ಬಿಟ್ಟು ಪರಾರಿಯಾಗಿದ್ದಾನೆ. ಜತೆಗೆ ಆತನ ಪಾಸ್‌ಪೋರ್ಟ್ ಅವಧಿಯೂ ಮುಗಿದಿದೆ. ಈ ಅವಧಿಯಲ್ಲಿ ಒಮ್ಮೆಯೂ ವಿಚಾರಣೆಗೆ ಹಾಜರಾಗಿಲ್ಲ.
ನ್ಯಾಯಾಲಯಕ್ಕೆ ದೇಶದಲ್ಲಿ ಇರುವುದಾಗಿ ತಿಳಿಸಿ ವಿಚಾರಣೆಗೆ ವೈಯಕ್ತಿಕವಾಗಿ ಹಾಜರಾಗದೇ ವಿನಾಯಿತಿ ಪಡೆದಿದ್ದಾನೆ. ಆದರೆ, ನಿತ್ಯಾನಂದ ಸ್ವಾಮಿ ಷರತ್ತು ಉಲ್ಲಂಘನೆ ಮಾಡಿ ದೇಶ ಬಿಟ್ಟು ಹೋಗಿದ್ದಾನೆ. ಕೂಡಲೇ ಆತನಿಗೆ ನೀಡಿರುವ ಜಾಮೀನು ರದ್ದುಪಡಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ. ಅರ್ಜಿಯನ್ನು ನ್ಯಾ.ಜಾನ್ ಮೈಕೆಲ್ ಕುನ್ಹಾ ಅವರಿದ್ದ ಪೀಠ ಶುಕ್ರವಾರ ವಿಚಾರಣೆ ನಡೆಸಿತು.