ಬೆಂಗಳೂರು: ಮೇ 21, 22 ರಂದು ಶಿಕ್ಷಕ ನೇಮಕಾತಿ ಪರೀಕ್ಷೆ ನಡೆಯುತ್ತದೆ ಎಂದು ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪರೀಕ್ಷಾ ದಿನಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ. ಊಹಾಪೋಹಗಳಿಗೆ ಯಾರೂ ಕಿವಿಗೊಡಬೇಡಿ. ಸಮಾಜ ವಿಜ್ಞಾನದಲ್ಲಿ ವಿಷಯದಲ್ಲಿ 1:50 ಇದೆ. ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚಾಗಿದೆ. 1,06,083 ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. 435 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುವುದು. ಚಿಕ್ಕೋಡಿಯಲ್ಲಿ ಹೆಚ್ಚು ಕೇಂದ್ರಗಳಿವೆ. ಸುಮಾರು 11 ಸಾವಿರ ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಹೀಗಾಗಿ ಅಲ್ಲಿ ಕೇಂದ್ರ ಜಾಸ್ತಿ ಮಾಡಲಾಗಿದೆ ಎಂದರು.
ಇಂದು ಉನ್ನತ ಅಧಿಕಾರಿಗಳ ಜೊತೆಗೆ ಸಭೆ ಮಾಡಿ ಅನುಭವಗಳನ್ನ ಪಡೆದುಕೊಂಡಿದ್ದೇವೆ. ಯಾವುದೇ ಕಾರಣಕ್ಕೂ ಎಲೆಕ್ಟ್ರಾನಿಕ್ ವಸ್ತುಗಳನ್ನ ತರುವಂತಿಲ್ಲ. ಪರೀಕ್ಷೆ ಕೇಂದ್ರಕ್ಕೆ ತರಬೇಡಿ ಎಂದು ತಿಳಿಸಿದ್ದೇವೆ. ಒಂದು ಗಂಟೆ ಒಳಗೆ ಕೇಂದ್ರಗಳಿಗೆ ಬರಬೇಕು. ಅರ್ಧ ಗಂಟೆಗೆ ಮುಂಚಿತವಾಗಿ ಕೊಠಡಿಗೆ ಬರಬೇಕು. ಪ್ರತಿರೂಮ್ನಲ್ಲೂ ಗಡಿಯಾರ, ಸಿಸಿ ಟಿವಿ ಕ್ಯಾಮರಾ ಅಳವಡಿಕೆ ಮಾಡಲಾಗುವುದು. ಎಲ್ಲಾ ತರದ ಸಲಹೆ ತೆಗೆದುಕೊಳ್ಳಲಾಗಿದೆ. ಒಂದು ರೂಮ್ನಲ್ಲಿ 20 ಜನರು ಮಾತ್ರ ಇರ್ತಾರೆ. ಸ್ಪರ್ಧಾತ್ಮಕ ಪರೀಕ್ಷೆಗೆ ಯಾವ ಗೊಂದಲಕ್ಕೀಡಾಗದೆ ಪರೀಕ್ಷೆಗೆ ಬರಬೇಕು ಎಂದು ತಿಳಿಸಿದರು.