ಕರ್ನಾಟಕ

karnataka

ETV Bharat / city

ಕಾಂಗ್ರೆಸ್‌ನಲ್ಲಿ ಯಾವುದೇ ಸಮಸ್ಯೆ ಇಲ್ಲ; ಸಾಮೂಹಿಕ ನಾಯಕತ್ವವೇ ಅಂತಿಮ: ಡಿ.ಕೆ ಶಿವಕುಮಾರ್‌ - ಕಾಂಗ್ರೆಸ್‌

ಕರ್ನಾಟಕ ಕಾಂಗ್ರೆಸ್‌ನಲ್ಲಿ ಯಾವುದೇ ಸಮಸ್ಯೆ ಇಲ್ಲ. ಪಕ್ಷದಲ್ಲಿ ಸಾಮೂಹಿಕ ನಾಯಕತ್ವ ಇರುವ ಒಂದೇ ಒಂದು ವಿಷಯ ಇರುತ್ತದೆ. ಪಕ್ಷದಲ್ಲಿ ಮುಂದಿನ ಸಿಎಂ ಯಾರೆಂಬುದನ್ನು ಘೋಷಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ದೆಹಲಿಯಲ್ಲಿ ಸ್ಪಷ್ಟಪಡಿಸಿದ್ದಾರೆ.

No CM face will be announced - Karnataka Cong Chief DK Shivakumar
ಕಾಂಗ್ರೆಸ್‌ನಲ್ಲಿ ಸಮಸ್ಯೆ ಇಲ್ಲ; ಸಾಮೂಹಿಕ ನಾಯಕತ್ವವೇ ಅಂತಿಮ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌

By

Published : Jul 21, 2021, 9:15 PM IST

Updated : Jul 21, 2021, 9:20 PM IST

ನವದೆಹಲಿ:ಮುಂದಿನ ಸಿಎಂ ಸಿದ್ದರಾಮಯ್ಯ, ಮುಂದಿನ ಸಿಎಂ ಡಿ.ಕೆ ಶಿವಕುಮಾರ್‌ ಎಂದು ಉಭಯ ನಾಯಕರ ಪರ ಆಪ್ತರು ಬ್ಯಾಟಿಂಗ್‌ ಮಾಡಿದ್ದರು. ಈ ಸುದ್ದಿ ರಾಜ್ಯದಲ್ಲಿ ಬಿಸಿ ಬಿಸಿ ಚರ್ಚೆಗೆ ಕಾರಣವಾಗಿತ್ತಲ್ಲದೆ ದೆಹಲಿಗೂ ವಿಷ್ಯ ಮುಟ್ಟಿತ್ತು. ಈ ಹಿನ್ನೆಲೆಯಲ್ಲಿ ಇಬ್ಬರು ಕೈ ನಾಯಕರಿಗೆ ಬುಲಾವ್‌ ನೀಡಿದ್ದ ರಾಹುಲ್‌ ಗಾಂಧಿ, ಕಾಂಗ್ರೆಸ್‌ ಶಾಸಕಾಂಗದ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಜೊತೆ ಮಾತುಕತೆ ನಡೆಸಿದ್ದಾರೆ.

ಕಾಂಗ್ರೆಸ್‌ನಲ್ಲಿ ಸಮಸ್ಯೆ ಇಲ್ಲ; ಸಾಮೂಹಿಕ ನಾಯಕತ್ವವೇ ಅಂತಿಮ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌

ರಾಹುಲ್‌ ಜೊತೆ ಮಾತುಕತೆ ಬಳಿಕ ಮಾತನಾಡಿರುವ ಡಿಕೆಶಿ, ಕರ್ನಾಟಕ ಕಾಂಗ್ರೆಸ್‌ನಲ್ಲಿ ಯಾವುದೇ ಸಮಸ್ಯೆ ಇಲ್ಲ. ಪಕ್ಷದಲ್ಲಿ ಸಾಮೂಹಿಕ ನಾಯಕತ್ವ ಇರುವ ಒಂದೇ ಒಂದು ವಿಷಯ ಇರುತ್ತದೆ ಎಂದು ಹೇಳಿದ್ದಾರೆ.

ಮುಂದಿನ ಸಿಎಂ ಯಾರೆಂಬುದನ್ನು ಘೋಷಿಸುವುದಿಲ್ಲ. ಬಿಜೆಪಿ ಮತ್ತು ಜೆಡಿಎಸ್ ಜೊತೆಗಿನ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಹೊರತುಪಡಿಸಿದರೆ ಯಾವ ನಾಯಕರೊಂದಿಗೂ ಬಿರುಕು ಇಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಪಕ್ಷಕ್ಕಾಗಿ ಒಟ್ಟಾಗಿ ಕೆಲಸ ಮಾಡಿ: ಡಿಕೆಶಿ, ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಸೂಚನೆ!

ಇದಕ್ಕೂ ಮುನ್ನ ಪ್ರತಿಕ್ರಿಯಿಸಿದ್ದ ವಿಪಕ್ಷ ನಾಯಕ ಸಿದ್ಧರಾಮಯ್ಯ, ಪಕ್ಷದೊಳಗಿನ ಯಾವುದೇ ಬಿರುಕುಗಳು ಇಲ್ಲ. ಎರಡೂ ಶಿಬಿರಗಳ ನಿಷ್ಠಾವಂತರು ಇತ್ತೀಚಿನ ವಾರಗಳಲ್ಲಿ ರಾಜ್ಯದ ಉನ್ನತ ಹುದ್ದೆಗೆ ತಮ್ಮ ನಾಯಕರನ್ನು ಸಾರ್ವಜನಿಕವಾಗಿ ಬೆಂಬಲಿಸುತ್ತಿದ್ದಾರೆ. ಅಂತಿಮವಾಗಿ ರಾಹುಲ್ ಗಾಂಧಿ ಮಧ್ಯಪ್ರವೇಶಿಸಿ ಯಾರಿಗೂ ಆದ್ಯತೆ ನೀಡುವುದಿಲ್ಲ ಎಂಬುದನ್ನು ನಿರ್ಧರಿಸಿದ್ದಾರೆ ಎಂದು ಹೇಳಿದರು.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್‌ ಸುರ್ಜೇವಾಲ ದೆಹಲಿಯಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿ, ಕರ್ನಾಟಕದಲ್ಲಿ ಕಾಂಗ್ರೆಸ್‌ ನಾಟಕರು ಒಟ್ಟಿಗೆ ಕೆಲಸ ಮಾಡುವುದಾಗಿ ಘೋಷಿಸಿದ್ದರು. ಅಲ್ಲದೆ, ಇಬ್ಬರೂ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸುವುದಿಲ್ಲ ಎಂದಿದ್ದರು.

Last Updated : Jul 21, 2021, 9:20 PM IST

ABOUT THE AUTHOR

...view details