ಕರ್ನಾಟಕ

karnataka

ETV Bharat / city

ಈ ವರ್ಷ ಹೊಸ ವರ್ಷಾಚರಣೆಗೆ ಏನು ರೂಲ್ಸ್​? ಯಾವುದಕ್ಕೆಲ್ಲಾ ಅನುಮತಿ? - Christmas guidelines

New Year Guidelines: ಕೋವಿಡ್ ಹಿನ್ನೆಲೆಯಲ್ಲಿ ಹೊಸ ವರ್ಷ ಆಚರಣೆಗೆ ಸರ್ಕಾರ ಕೆಲ ಕಠಿಣ ನಿರ್ಬಂಧಗಳನ್ನು ವಿಧಿಸಿ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಹೊಸ ವರ್ಷ ಆಚರಣೆಗೆ ನಿರ್ಬಂಧ,Karnataka Govt releases New Year Guidelines
ಹೊಸ ವರ್ಷ ಆಚರಣೆಗೆ ನಿರ್ಬಂಧ

By

Published : Dec 21, 2021, 3:55 PM IST

Updated : Dec 21, 2021, 10:22 PM IST

ಬೆಂಗಳೂರು/ಬೆಳಗಾವಿ:ಕೋವಿಡ್, ಒಮಿಕ್ರಾನ್ ಹೆಚ್ಚಳ ಹಿನ್ನೆಲೆ ಹೊಸ ವರ್ಷದ ಸಂಭ್ರಮಾಚರಣೆಗೆ ನಿರ್ಬಂಧ ಹೇರಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಒಮಿಕ್ರಾನ್ ಕೋವಿಡ್ ಸಂಬಂಧ ಸಿಎಂ ಸುವರ್ಣಸೌಧಲ್ಲಿ ಸಭೆ ನಡೆಸಿ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಿದರು. ಸಭೆ ಬಳಿಕ ಮಾತನಾಡಿದ ಸಿಎಂ, ಬಹಿರಂಗ ಸಂಭ್ರಾಮಾಚರಣೆಗೆ ನಿರ್ಬಂಧ ಹೇರಲಾಗಿದೆ. ಡಿ.30ರಿಂದ ಜನವರಿ 2ರ ತನಕ ಹೊಸ ಮಾರ್ಗಸೂಚಿ ಇರಲಿದೆ. ಡಿಜೆಗೆ ಅವಕಾಶ ಇಲ್ಲ. ಎಂಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಯಂತೆ ರಾಜ್ಯಾದ್ಯಂತ ಯಾವುದೇ ಹೊಸ ವರ್ಷದ ಬಹಿರಂಗ ಸಂಭ್ರಮಾಚರಣೆಗೆ ಅವಕಾಶ ಇಲ್ಲ ಎಂದರು.

ಸಭೆ ಬಳಿಕ ಮಾತನಾಡಿದ ಸಿಎಂ

ಬಾರ್ ಮತ್ತು ರೆಸ್ಟೋರೆಂಟ್​ನಲ್ಲಿ ಶೇ.50ರಷ್ಟು ಜನರಿಗೆ ಅವಕಾಶ ಇರಲಿದೆ. ಬಾರ್ ಅಂಡ್ ರೆಸ್ಟೋರೆಂಟ್ ಸಿಬ್ಬಂದಿಗೆ ಎರಡು ಲಸಿಕೆ ಕಡ್ಡಾಯವಾಗಿದೆ. ಕ್ರಿಸ್ ಮಸ್ ಆಚರಣೆಗೆ ಯಾವುದೇ ನಿಷೇಧ ಇಲ್ಲ. ಅಪಾರ್ಟ್ಮೆಂಟ್​​ಗಳಲ್ಲಿ ಸಂಭ್ರಮಾಚರಣೆಗೆ ಕೆಲ ನಿರ್ಬಂಧ ಹೇರಲಾಗುವುದು ಎಂದು ತಿಳಿಸಿದರು.

ಇದೇ ವೇಳೆ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ‌.ಸುಧಾಕರ್, ಸಭೆಯಲ್ಲಿ ನಮ್ಮ ಇಲಾಖೆ ಅಧಿಕಾರಿಗಳು ಹಾಗೂ ತಾಂತ್ರಿಕ ಸಮಿತಿಯ ಸದಸ್ಯರು ಭಾಗಿಯಾಗಿದ್ದೆವು. ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳನ್ನು ಪರಿಗಣಿಸಿದ್ದೇವೆ. ಡಿಸೆಂಬರ್ 30 ರಿಂದ ಜನವರಿ 2 ರವರೆಗೂ ಹೊಸವರ್ಷದ ಸಂಭ್ರಮಾಚರಣೆಗೆ ಕಡಿವಾಣ ಹಾಕಲಾಗಿದೆ. ಒಮಿಕ್ರಾನ್ ಪತ್ತೆಯಾಗಿದೆ. ಬೇರೆ ದೇಶದಲ್ಲಿ ವೇಗವಾಗಿ ಹರಡುತ್ತಿದೆ. ಹೀಗಾಗಿ ಈ ನಿರ್ಧಾರವನ್ನ ಸರ್ಕಾರ ತೆಗೆದುಕೊಂಡಿದೆ ಎಂದರು.

ಇದಕ್ಕೆ ಜನರು ಸಹಕರಿಸಬೇಕು. ಕ್ರಿಸ್ ಮಸ್ ಆಚರಣೆಗೆ ಚರ್ಚ್​ಗೆ ಹೋಗ್ತಾರೆ. ಇದಕ್ಕೆ ಯಾವುದೇ ನಿರ್ಬಂಧ ಇಲ್ಲ. ರೆಸ್ಟೋರೆಂಟ್ ಹಾಗೂ ಕ್ಲಬ್​ಗಳಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಗೆ ಡಬಲ್ ಡೋಸ್ ಲಸಿಕೆ ಕಡ್ಡಾಯವಾಗಿದೆ ಎಂದು ವಿವರಿಸಿದರು.

ಹೊಸ ವರ್ಷದ ಸಂಭ್ರಮಾಚರಣೆಗೆ ನಿರ್ಬಂಧ

ಕ್ರಿಸ್ ಮಸ್ ಆಚರಣೆ:

  • ಚರ್ಚ್ ಆವರಣದಲ್ಲಿ ಸಾಂಪ್ರದಾಯಿಕ ರೀತಿಯಲ್ಲಿ ಪ್ರಾರ್ಥನೆ/ ಸಾಮೂಹಿಕ ಕಾರ್ಯಕ್ರಮ ವೇಳೆ ಕೋವಿಡ್ ಮಾರ್ಗಸೂಚಿ ಪಾಲನೆ ಮಾಡಬೇಕು. ಮಾಸ್ಕ್, ಸಾಮಾಜಿಕ ಅಂತರ ಸ್ಯಾನಿಟೈಸ್ ಕಡ್ಡಾಯ. ಆಚರಣೆಗಳು ಅಥವಾ ಪ್ರಾರ್ಥನೆಗಳನ್ನು ನಡೆಸಲು ಯಾವುದೇ ಸಾರ್ವಜನಿಕ ಸ್ಥಳಗಳು/ರಸ್ತೆಗಳು/ಉದ್ಯಾನವನ ಇತ್ಯಾದಿಗಳನ್ನು ಬಳಸುವಂತಿಲ್ಲ.

ಹೊಸ ವರ್ಷಾಚರಣೆ:

  • ಕ್ಲಬ್‌ಗಳು, ಪಬ್‌ಗಳು, ರೆಸ್ಟೋರೆಂಟ್‌ಗಳು, ಹೋಟೆಲ್‌ಗಳು, ಉದ್ಯಾನವನಗಳು ಅಥವಾ ಖಾಸಗಿ ಸ್ಥಳಗಳಲ್ಲಿ ಡಿಜಿ / ಆರ್ಕೆಸ್ಟ್ರಾ / ಸಮೂಹ ನೃತ್ಯ (Dancing) ಮುಂತಾದ ಯಾವುದೇ ವಿಶೇಷ ಕಾರ್ಯಕ್ರಮಗಳನ್ನು ನಡೆಸಲು ಅವಕಾಶವಿಲ್ಲ.
  • ಹೊಸ ವರ್ಷವನ್ನು ಆಚರಿಸಲು ಸಾರ್ವಜನಿಕ ಸ್ಥಳಗಳು ಸೇರಿದಂತೆ ರಸ್ತೆಗಳು, ಉದ್ಯಾನವನಗಳು, ಆಟದ ಮೈದಾನಗಳು ಇತ್ಯಾದಿಗಳನ್ನು ಬಳಸಬಾರದು.
  • ರೆಸ್ಟೋರೆಂಟ್‌ಗಳು, ಹೋಟೆಲ್‌ಗಳು, ಕ್ಲಬ್‌ಗಳು, ಪಬ್‌ಗಳು ಎಂದಿನಂತೆ ಕೋವಿಡ್ ನಿಯಮ ಪಾಲನೆ ಮಾಡಬೇಕು. RTPCR Negative ಮತ್ತು 2 ಡೋಸ್ ಕೋವಿಡ್ ಲಸಿಕೆಯನ್ನು ಕಡ್ಡಾಯವಾಗಿ ಪಡೆದು ನಂತರ ಕಾರ್ಯ ನಿರ್ವಹಿಸಬಹುದು.
  • ಇಲ್ಲಿಗೆ ಪ್ರವೇಶ ನೀಡುವ ಸಾರ್ವಜನಿಕರು ಕಡ್ಡಾಯವಾಗಿ 2 ಡೋಸ್ ಕೋವಿಡ್ ಲಸಿಕೆ ಯನ್ನು ಪಡೆದಿರಬೇಕು. ಅದನ್ನು ತೋರಿಸಿದ ನಂತರವೇ ಪ್ರವೇಶಕ್ಕೆ ಅವಕಾಶ ಮಾಡಿಕೊಡಬೇಕು.
  • ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ಗೆ ಸಂಬಂಧಪಟ್ಟಂತೆ ಸಾಮಾಜಿಕ ಅಂತರ ಹಾಗೂ ಕೋವಿಡ್ ಸಮುಚಿತ ವರ್ತನೆಯೊಂದಿಗೆ ತಮ್ಮ ಆವರಣದಲ್ಲಿ ಕಾರ್ಯಕ್ರಮ ನಡೆಸಲು ಅನುಮತಿಸಲಾಗಿದೆ. ಆದರೆ ಗ್ರೂಪ್ ಡ್ಯಾನ್ಸ್, ಡಿಜೆ / ಡಾನ್ಸ್ ಫ್ಲೋರ್‌ನಂತಹ ಯಾವುದೇ ವಿಶೇಷ ಕಾರ್ಯಕ್ರಮಗಳನ್ನು ಆಚರಿಸುವಂತಿಲ್ಲ.
  • ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರವನ್ನು ಕಾಯ್ದು ಕೊಳ್ಳಬೇಕು.
  • ಹೋಟೆಲ್‌ಗಳು, ಮಾಲ್‌ಗಳು, ರೆಸ್ಟೋರೆಂಟ್ ಹಾಗೂ ಅಂತಹ ಪ್ರದೇಶಗಳಲ್ಲಿ ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಸ್ ವ್ಯವಸ್ಥೆ ಕಡ್ಡಾಯ.
Last Updated : Dec 21, 2021, 10:22 PM IST

ABOUT THE AUTHOR

...view details