ನವದೆಹಲಿ :ಸಂಪುಟ ವಿಸ್ತರಣೆ ಬಗ್ಗೆ ಪಕ್ಷದ ವರಿಷ್ಠರ ಜತೆ ಚರ್ಚೆಯಾಗಿಲ್ಲ. ಸುಪ್ರೀಂಕೋರ್ಟ್ ಬಿಬಿಎಂಪಿ ಹಾಗೂ ಇತರೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸೂಚಿಸಿರುವ ಹಿನ್ನೆಲೆಯಲ್ಲಿ ಅದರ ಬಗ್ಗೆ ಚರ್ಚೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಮಿತ್ ಶಾ ಅವರ ಸೂಚನೆಯಂತೆ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರೊಂದಿಗೆ ಮಾತನಾಡಿ, ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆಗೆ ಕಳುಹಿಸಲಾಗಿರುವ ಪಟ್ಟಿಯ ಬಗ್ಗೆ ವಿವರಗಳನ್ನು ನೀಡಲಾಗಿದೆ ಎಂದರು.