ಬೆಂಗಳೂರು: ನಗರದ ಕ್ಲಾರೆನ್ಸ್ ಶಾಲೆಯಲ್ಲಿ ಬೈಬಲ್ ಕಡ್ಡಾಯ ವಿಚಾರಕ್ಕೆ ಸಂಬಂಧಿಸಿದಂತೆ ಅದು ರಾಜ್ಯ ಶಿಕ್ಷಣ ಕಾಯ್ದೆಗೆ ವಿರುದ್ಧವಾಗಿದೆ. ಯಾವುದೇ ಶಿಕ್ಷಣ ಸಂಸ್ಥೆಯಾಗಲಿ ಧಾರ್ಮಿಕ ಗ್ರಂಥಗಳ ಅಳವಡಿಕೆಗೆ ಅವಕಾಶ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಖಡಕ್ ಆಗಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆ ಶಾಲೆಗೆ ಶಿಕ್ಷಣ ಇಲಾಖೆಯಿಂದ ನೋಟಿಸ್ ಕೊಡುತ್ತೇವೆ ಎಂದರು.
ಕ್ಲಾರೆನ್ಸ್ ಶಾಲೆಯಲ್ಲಿ ಎಲ್ಲ ಧರ್ಮದ ಮಕ್ಕಳೂ ಬರುತ್ತಾರೆ. ಪ್ರಜಾಪ್ರಭುತ್ವದ ಅಡಿ ಶಿಕ್ಷಣ ಇಲಾಖೆ ಕ್ರಮ ತೆಗೆದುಕೊಳ್ಳುತ್ತದೆ. ರಾಜ್ಯದ ಎಲ್ಲ ಕ್ರೈಸ್ತ ಶಿಕ್ಷಣ ಸಂಸ್ಥೆಗಳ ಮೇಲೆ ನಿಗಾ ಸೂಚನೆ ನೀಡಲಾಗಿದೆ. ಅದೇ ರೀತಿ ಎಲ್ಲ ಬಿಇಒಗಳಿಗೆ ಕ್ರೈಸ್ತ ಶಿಕ್ಷಣಗಳಿಗೆ ಹೋಗಿ ಪರಿಶೀಲನೆ ನಡೆಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಅಡ್ಮಿಷನ್ ವೇಳೆ ಬೈಬಲ್ ಇದೆ ಒಪ್ಪಿಗೆ ಇದೆಯಾ ಅಂತ ಕೇಳುತ್ತಾರೆ. ಇಲ್ಲ ಅಂದರೆ ಅಡ್ಮಿಷನ್ ಕೊಡಲ್ಲ ಇದು ತಪ್ಪು. ಎಲ್ಲಾ ಕ್ರೈಸ್ತ ಶಿಕ್ಷಣ ಸಂಸ್ಥೆಗಳ ಪಠ್ಯ ಪರಿಶೀಲನೆಗೆ ಸೂಚನೆ ನೀಡಲಾಗಿದೆ. ಪ್ರಜಾಪ್ರಭುತ್ವದ ಅಡಿ ಶಿಕ್ಷಣ ಇಲಾಖೆ ಕ್ರಮ ತೆಗೆದುಕೊಳ್ಳುತ್ತದೆ. ಯಾವುದೇ ಬೋರ್ಡ್ ವ್ಯಾಪ್ತಿಯ ಅಲ್ಪಸಂಖ್ಯಾತರ ಶಾಲೆಯಲ್ಲಿ ಧರ್ಮದ ಬೋಧನೆ ನಿಷೇಧಿಸಲಾಗಿದೆ. ಅದಕ್ಕೆ ಅವಕಾಶ ನೀಡದಂತೆ ಶಿಕ್ಷಣ ಇಲಾಖೆ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.