ಬೆಂಗಳೂರು :ಉತ್ತರಪ್ರದೇಶ ಮಾದರಿಯಲ್ಲಿ ಸರ್ಕಾರಿ ಸವಲತ್ತು ಮತ್ತು ಸಬ್ಸಿಡಿ ಸೌಲಭ್ಯ ಪಡೆಯಲು ಎರಡು ಮಕ್ಕಳ ಮಿತಿ ನೀತಿಯನ್ನು ಅಳವಡಿಸಿಕೊಳ್ಳಬೇಕು ಎಂದು ಬಿಜೆಪಿ ಸದಸ್ಯೆ ಭಾರತಿ ಶೆಟ್ಟಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಎರಡಕ್ಕೂ ಹೆಚ್ಚು ಮಕ್ಕಳಿರುವ ಕುಟುಂಬಕ್ಕೆ ಸರ್ಕಾರಿ ಸವಲತ್ತು ಬೇಡ : ಭಾರತಿಶೆಟ್ಟಿ ಪ್ರಸ್ತಾಪ ವಿಧಾನ ಪರಿಷತ್‌ನ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಭಾರತಿಶೆಟ್ಟಿ, ದೇಶ-ರಾಜ್ಯದಲ್ಲಿ ಜನಸಂಖ್ಯಾ ಸ್ಪೋಟವಾಗುತ್ತಿದೆ. ಇದರ ನಿಯಂತ್ರಣಕ್ಕೆ ಸಾಕಷ್ಟು ಪ್ರಯತ್ನ ಪಟ್ಟರೂ ಸಫಲ ಕಂಡಿಲ್ಲ. ಹೀಗಾಗಿ, ಸರ್ಕಾರ ಕೊಡುತ್ತಿರುವ ಸವಲತ್ತು, ಸಬ್ಸಿಡಿ ಬಳಕೆಗೆ ಉತ್ತರಪ್ರದೇಶ ಮಾದರಿ ಅನುಸರಿಸಬೇಕು.
ಕೇವಲ 2 ಮಕ್ಕಳನ್ನು ಹೊಂದಿದವರಿಗೆ ಮಾತ್ರ ಸರ್ಕಾರಿ ಸವಲತ್ತು ನೀಡುವ ಬಗ್ಗೆ ಪರಿಶೀಲಿಸಬೇಕು. ಈಗಾಗಲೇ ಉತ್ತರಪ್ರದೇಶದಲ್ಲಿ ಇಂತಹ ಪದ್ಧತಿ ಇರುವ ಕುರಿತು ಮಾಹಿತಿ ಇದೆ. ಇಲ್ಲಿಯೂ ಅಂತಹ ಪದ್ದತಿ ಜಾರಿಗೆ ಮುಂದಾಗಬೇಕು ಎಂದರು. ಭಾರತಿಶೆಟ್ಟಿ ಅವರ ಪ್ರಸ್ತಾಪಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಉತ್ತರ ಕೊಡಿಸುವುದಾಗಿ ಸರ್ಕಾರದ ಪರವಾಗಿ ಸಚಿವ ಭೈರತಿ ಬಸವರಾಜ ಭರವಸೆ ನೀಡಿದರು.
ಇದನ್ನೂ ಓದಿ:ಹಿಜಾಬ್ ವಿಚಾರದಲ್ಲಿ ಆದೇಶ ಉಲ್ಲಂಘಿಸಿದರೆ ಕ್ರಮ: ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ