ಬೆಂಗಳೂರು: ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ಬರೀ ಕಪೋಲಕಲ್ಪಿತವಾದ ಸುದ್ದಿಯಾಗಿದೆ. ಬೊಮ್ಮಾಯಿ ಅವರೇ ಮುಖ್ಯಮಂತ್ರಿ ಆಗಿ ಮುಂದುವರೆಯಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.
ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕಾಮನ್ ಮ್ಯಾನ್ ಸಿಎಂ. ನರೇಂದ್ರ ಮೋದಿ ನಾಯಕತ್ವದಲ್ಲಿ ಒಳ್ಳೆಯ ಆಡಳಿತ ಕೊಡುತ್ತಿದ್ದಾರೆ. ಜನರ ಬಯಕೆ ಕೂಡ ಅವರ ಮುಂದುವರಿಕೆಯೇ ಆಗಿದೆ. ಹೀಗಾಗಿ ಕಾಲ್ಪನಿಕ ಪ್ರಶ್ನೆಗಳಿಗೆ ಉತ್ತರವಿಲ್ಲ. ನಾಯಕತ್ವ ಬದಲಾವಣೆ ಎನ್ನುವುದು ಕಪೋಲ ಕಲ್ಪಿತ ಎಂದರು.