ಬೆಂಗಳೂರು: ಕೇಂದ್ರ ಸರ್ಕಾರ ಲಾಕ್ ಡೌನ್ ಸಡಿಲಿಕೆ ಮಾಡುತ್ತಿದ್ದಂತೆ ಹೊರ ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ರಾಜ್ಯ ಪೊಲೀಸ್ ಇಲಾಖೆ ಗುಡ್ ನ್ಯೂಸ್ ಕೊಟ್ಟಿದೆ.
ಮಹಾರಾಷ್ಟ್ರ ಹೊರತುಪಡಿಸಿ ಬೇರೆ ರಾಜ್ಯಗಳಿಂದ ಬರುವವರಿಗೆ ಕೇವಲ ಹೋಂ ಕ್ವಾರಂಟೈನ್ : ಡಿಜಿ ಟ್ವೀಟ್ - ರಾಜ್ಯ ಪೊಲೀಸ್ ಇಲಾಖೆ ಮಹಾನಿರ್ದೇಶಕ ಪ್ರವೀಣ್ ಸೂದ್
ಮಹಾರಾಷ್ಟ್ರ ಹೊರತು ಪಡಿಸಿ ಇತರೆ ರಾಜ್ಯಗಳಿಂದ ಬರುವವರಿಗೆ 14 ದಿನಗಳ ಕಾಲ ಮನೆಯಲ್ಲೇ ಕ್ವಾರಂಟೈನ್ ಮಾಡಲಾಗುವುದು ಎಂದು ರಾಜ್ಯ ಪೊಲೀಸ್ ಇಲಾಖೆ ಮಹಾನಿರ್ದೇಶಕ ಪ್ರವೀಣ್ ಸೂದ್ ಟ್ವೀಟ್ ಮಾಡಿದ್ದಾರೆ.
ಇಷ್ಟು ದಿನಗಳ ಕಾಲ ಹೈರಿಸ್ಕ್ ರಾಜ್ಯಗಳಾದ ಗುಜರಾತ್, ರಾಜಸ್ತಾನ, ಕೇರಳ, ತಮಿಳುನಾಡು ಹಾಗೂ ಮಹಾರಾಷ್ಟ್ರಗಳಿಂದ ಬರುವ ಪ್ರಯಾಣಿಕರು ಸಾಂಸ್ಥಿಕ ಕ್ವಾರಂಟೈನ್ಗೆ ಒಳಗಾಗುವುದು ಕಡ್ಡಾಯವಾಗಿತ್ತು. ಇದೀಗ ನಿಯಮ ಸಡಿಲಗೊಳಿಸಿರುವ ಪೊಲೀಸ್ ಇಲಾಖೆಯು ಮಹಾರಾಷ್ಟ್ರ ಹೊರತುಪಡಿಸಿ ಇತರೆ ರಾಜ್ಯಗಳಿಂದ ಬರುವವರು ಕೇವಲ 14 ದಿನಗಳ ಕಾಲ ಹೋಂ ಕ್ವಾರಂಟೈನ್ಗೆ ಒಳಗಾದರೆ ಸಾಕು ಎಂದು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
ಮಹಾರಾಷ್ಟ್ರದಿಂದ ಬರುವವರು ಏಳು ದಿನಗಳ ಸಾಂಸ್ಥಿಕ ಕ್ವಾರಂಟೈನ್ಗೆ ಒಳಗಾಗಿ ಬಳಿಕ ಕಡ್ಡಾಯವಾಗಿ 7 ದಿನಗಳ ಕಾಲ ಹೋಂ ಕ್ವಾರಂಟೈನ್ಗೆ ಒಳಗಾಗಬೇಕು ಎಂದು ರಾಜ್ಯ ಪೊಲೀಸ್ ಇಲಾಖೆ ಮಹಾನಿರ್ದೇಶಕ ಪ್ರವೀಣ್ ಸೂದ್ ಟ್ವೀಟ್ ಮಾಡಿದ್ದಾರೆ.