ಕರ್ನಾಟಕ

karnataka

ETV Bharat / city

ಪಠ್ಯ-ಪುಸ್ತಕದಲ್ಲಿ ನಾರಾಯಣಗುರು ವಿಷಯ ಕೈಬಿಟ್ಟಿಲ್ಲ: ಕೋಟ ಶ್ರೀನಿವಾಸ ಪೂಜಾರಿ - Not removed Lessons of narayana guru in books

ಸಿಎಂ ಹಾಗೂ ಶಿಕ್ಷಣ ಸಚಿವರನ್ನ ಭೇಟಿ ಮಾಡಿ ಚರ್ಚೆ ಮಾಡಿದ್ದೇನೆ. ನಾರಾಯಣಗುರು ಕುರಿತಾದ ಪಠ್ಯವನ್ನ ಕೈ ಬಿಡುವ ಪ್ರಶ್ನೆಯೇ ಇಲ್ಲ. ಪ್ರತಿಪಕ್ಷಗಳು ವಿನಾಕಾರಣ ಆರೋಪ ಮಾಡಬಾರದು. ಇಂತಹ ಸುಳ್ಳು ವದಂತಿ ಹರಡಬಾರದು. ನಾವು ಯಾವುದೇ ಪಠ್ಯವನ್ನು ಕೈಬಿಟ್ಟಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದರು..

ಕೋಟ ಶ್ರೀನಿವಾಸ ಪೂಜಾರಿ
ಕೋಟ ಶ್ರೀನಿವಾಸ ಪೂಜಾರಿ

By

Published : May 20, 2022, 2:14 PM IST

ಬೆಂಗಳೂರು: ಶಾಲಾ‌ ಪಠ್ಯ-ಪುಸ್ತಕದಲ್ಲಿ ನಾರಾಯಣಗುರು ವಿಷಯ ಕೈಬಿಟ್ಟಿಲ್ಲ ಎಂದು ಸಮಾಜಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಕುರಿತು ಶಿಕ್ಷಣ ಸಚಿವರ ಜೊತೆ ಮಾತನಾಡಿದ್ದೇನೆ. ಅವರು ಪಠ್ಯದಿಂದ ನಾರಾಯಣಗುರು ವಿಷಯ ಕೈಬಿಟ್ಟಿಲ್ಲವೆಂದು ಹೇಳಿದ್ದಾರೆ ಅಂತಾ ಸ್ಪಷ್ಟಪಡಿಸಿದರು.

ಸಿಎಂ ಹಾಗೂ ಶಿಕ್ಷಣ ಸಚಿವರನ್ನ ಭೇಟಿ ಮಾಡಿ ಚರ್ಚೆ ಮಾಡಿದ್ದೇನೆ. ನಾರಾಯಣಗುರು ಕುರಿತಾದ ಪಠ್ಯವನ್ನ ಕೈ ಬಿಡುವ ಪ್ರಶ್ನೆಯೇ ಇಲ್ಲ. ಪ್ರತಿಪಕ್ಷಗಳು ವಿನಾಕಾರಣ ಆರೋಪ ಮಾಡಬಾರದು. ಇಂತಹ ಸುಳ್ಳು ವದಂತಿ ಹರಡಬಾರದು. ನಾವು ಯಾವುದೇ ಪಠ್ಯವನ್ನು ಕೈಬಿಟ್ಟಿಲ್ಲ ಎಂದು ಸ್ಪಷ್ಟಪಡಿಸಿದರು.

ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮ ನಡೆದಿಲ್ಲ : ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮ ನಡೆದಿದೆ ಎಂಬ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಆರೋಪವನ್ನು ತಳ್ಳಿ ಹಾಕಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಎಸ್​ಸಿ,ಎಸ್​ಟಿಗಳಿಗೆ ನೀಡುವ ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮವಾಗಿಲ್ಲ. ಎರಡು ಗುಂಪುಗಳ ನಡುವೆ ಟೆಂಡರ್ ಸಿಕ್ಕಿರೋದೆ ಸಂಘರ್ಷಕ್ಕೆ ಕಾರಣವಾಗಿದೆ.

ಮೂರು ಸಾವಿರ ಕೊಳವೆ ಬಾವಿ ಕೊರೆದಿದ್ದಾರೆ. ಅನೇಕ ಕಡೆ ಕೊಳವೆ ಬಾವಿಯಾಗಿಲ್ಲ. ಪ್ರಿಯಾಂಕ್ ಖರ್ಗೆ ಅವರು ಸದನದಲ್ಲಿ ಕೇಳಿದಾಗ ಉತ್ತರ ನೀಡಿದ್ದೇನೆ ಎಂದು ಹೇಳಿದರು. ಟೆಂಡರ್​ನಲ್ಲಿ ಯಾವುದೇ ಗೋಲ್ಮಾಲ್ ಆಗಿಲ್ಲ. ಈಗಾಗಲೇ ತನಿಖಾಧಿಕಾರಿಯನ್ನು ನೇಮಕ ಮಾಡಿದ್ದೇವೆ. ವರದಿ ಬಂದ ಬಳಿಕ ನನ್ನನ್ನೂ ಸೇರಿದಂತೆ ಎಲ್ಲರನ್ನೂ ತನಿಖೆಗೆ ಒಳಪಡಿಸುತ್ತಾರೆ. ಸುಖಾಸುಮ್ಮನೆ ಆರೋಪ ಮಾಡೋದು ಸರಿಯಲ್ಲ ಎಂದರು.

ಇದನ್ನೂ ಓದಿ:88 ಪ್ರಕರಣಗಳಲ್ಲಿ ಆರೋಪಿ ಈ ರಾಜಕಾರಣಿ: 27 ತಿಂಗಳ ನಂತರ ಜೈಲಿನಿಂದ ರಿಲೀಸ್​

ABOUT THE AUTHOR

...view details