ಬೆಂಗಳೂರು: ಹೂವಿನಹಡಗಲಿಯಲ್ಲಿ ಕಲುಷಿತ ನೀರು ಕುಡಿದು 6 ಮಂದಿ ಸಾವನ್ನಪ್ಪಿರುವ ಪ್ರಕರಣದ ಬಗ್ಗೆ ಹಿರಿಯ ಐಎಎಸ್ ಅಧಿಕಾರಿ ಮನೀಶ್ ಮೌದ್ಗಿಲ್ ನೇತೃತ್ವದಲ್ಲಿ ತನಿಖೆಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಕಲುಷಿತ ನೀರು ಈವರೆಗೆ 6 ಮಂದಿ ಕೆಲವರು ಸಾವನ್ನಪ್ಪಿರುವುದು ಗಂಭೀರ ವಿಚಾರ. ಪ್ರಕರಣವನ್ನು ಸರ್ಕಾರ ಬಹಳ ಗಂಭೀರವಾಗಿ ಪರಿಗಣಿಸಿದೆ. ಕಲುಷಿತ ವಾಟರ್, ಕುಡಿಯುವ ನೀರಿಗೆ ಹೇಗೆ ಮಿಶ್ರಿತ ಆಯ್ತು ಅನ್ನೋ ಬಗ್ಗೆ ವರದಿ ಕೊಡಲು ಹೇಳಿದ್ದೇನೆ. ವರದಿ ಕೊಟ್ಟ ನಂತರ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ತೇನೆ. ಮೃತಪಟ್ಟವರ ಪ್ರತಿ ಕುಟುಂಬಕ್ಕೆ 3 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡ್ತಿದ್ದೇವೆ ಎಂದು ತಿಳಿಸಿದರು.