ಬೆಂಗಳೂರು :ಚಾಮರಾಜನಗರ ಜಿಲ್ಲೆಯಲ್ಲಿ 95 ಕಪ್ಪುಶಿಲೆ ಮತ್ತು 68 ಕಟ್ಟಡ ಕಲ್ಲುಗಣಿಗಳು ನಿಯಮ ಉಲ್ಲಂಘಿಸಿ ಗಣಿಗಾರಿಕೆ ನಡೆಸಿದ್ದು, ಗುತ್ತಿಗೆದಾರರಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಆಚಾರ್ ಹಾಲಪ್ಪ ವಿಧಾನಸಭೆಯಲ್ಲಿ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಆರ್.ನರೇಂದ್ರ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, 8 ತಂಡಗಳನ್ನು ಮಾಡಿ ಗಣಿಗಳ ಸರ್ವೆ ಮಾಡಿಸಿ ನೋಟಿಸ್ ನೀಡಲಾಗಿದೆ. ನಿಯಮಗಳನ್ನು ಉಲ್ಲಂಘಿಸಿದರೆ ಗಣಿಗಾರಿಕೆ ಬಂದ್ ಮಾಡಲಾಗುವುದೆಂದು ಎಚ್ಚರಿಕೆ ನೀಡಿದರು.
ನಿಯಮ ಉಲ್ಲಂಘಿಸಿದ ಗಣಿ ಗುತ್ತಿಗೆದಾರರಿಗೆ ನೋಟಿಸ್ ಜಾರಿ : ಆಚಾರ್ ಹಾಲಪ್ಪ - ಗಣಿ ಗುತ್ತಿಗೆದಾರರಿಗೆ ನೋಟಿಸ್ ಜಾರಿ
ನಿಯಮ ಉಲ್ಲಂಘಿಸಿ ಗಣಿಗಾರಿಕೆ ಮಾಡುವ ಗುತ್ತಿಗೆದಾರರಿಗೆ ನೋಟಿಸ್ ಜಾರಿ ಮಾಡಿದ ಬಗ್ಗೆ ವಿಧಾನಸಭೆಗೆ ಸಚಿವ ಆಚಾರ್ ಹಾಲಪ್ಪ ಮಾಹಿತಿ ನೀಡಿದರು..
ಆಚಾರ್ ಹಾಲಪ್ಪ
ಗುಂಡ್ಲುಪೇಟೆ ತಾಲೂಕಿನಲ್ಲಿ ಗುಡ್ಡ ಕುಸಿದು ಕಲ್ಲು ಗಣಿಗಾರಿಕೆ ಕೆಲಸ ಮಾಡುತ್ತಿದ್ದ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಭೇಟಿ ನೀಡಿದ್ದರು. ಈ ಘಟನೆ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಗಣಿಗಳನ್ನು ಪರಿಶೀಲಿಸಲಾಗಿದೆ. ಗಣಿ ಸುರಕ್ಷತೆ ಸಂಬಂಧ ಪ್ರಕರಣ ನ್ಯಾಯಾಲಯದಲ್ಲಿ ದಾಖಲಾಗಿದ್ದು, ಮೃತಪಟ್ಟವರಿಗೆ ಅಲ್ಲಿ ಪರಿಹಾರ ಸಿಗಲಿದೆ. ಸರ್ಕಾರದಿಂದ ಪರಿಹಾರ ಒದಗಿಸುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.
Last Updated : Mar 25, 2022, 3:31 PM IST