ಬೆಂಗಳೂರು:ಲಾಕ್ಡೌನ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಆಟೋ, ಕ್ಯಾಬ್ ಹಾಗೂ ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ ಘೋಷಿಸಿದ್ದ ಪರಿಹಾರಧನ ಪಡೆಯಲು ಇಂದಿನಿಂದ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಸೇವಾ ಸಿಂಧೂ ಜಾಲತಾಣದಲ್ಲಿ ನಿಗದಿತ ನಮೂನೆಯಲ್ಲಿ ಅರ್ಹ ಫಲಾನುಭವಿಗಳು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ಇಂದು ಬೆಳಗ್ಗೆ 11 ಗಂಟೆಯಿಂದ ಅರ್ಜಿ ಸಲ್ಲಿಕೆಗೆ ಅನುವು ಮಾಡಿಕೊಡಲಾಗಿದೆ ಎಂದು ಸಾರಿಗೆ ಹಾಗೂ ರಸ್ತೆ ಸುರಕ್ಷತೆ ಆಯುಕ್ತರು ತಿಳಿಸಿದ್ದಾರೆ.