ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಪ್ರಮಾಣ ಹೆಚ್ಚಾಗಿದೆ ಮತ್ತು ಪಬ್ಲಿಕ್ ಶಾಲೆಯಲ್ಲಿ ಸೀಟ್ಗಾಗಿ ಐಎಎಸ್ ಅಧಿಕಾರಿಗಳು ಫೋನ್ ಮಾಡಿ ಮನವಿ ಮಾಡುತ್ತಿರುವುದು ಸ್ವಾಗತಾರ್ಹ ವಿಚಾರವಾಗಿದೆ ಎಂದು ಎಸ್. ಸುರೇಶ್ ಕುಮಾರ್ ಹೇಳಿದರು.
ಜುಲೈ 19 ರಂದು ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲ್ಲಿದ್ದು, ಪರೀಕ್ಷಾ ತಯಾರಿ ಬಗ್ಗೆ ಪರಿಶೀಲನೆ ನಡೆಸಲು ಪರೀಕ್ಷಾ ಕೇಂದ್ರಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭೇಟಿ ನೀಡುತ್ತಿದ್ದಾರೆ. ಇಂದು ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ, ಕೊಂಗಾಡಿಯಪ್ಪ, ನಳಂದ, ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢ ಶಿಕ್ಷಣ ವಿಭಾಗಕ್ಕೆ ಭೇಟಿ ನೀಡಿದರು.
ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಾಗಿರುವ ಬಗ್ಗೆ ಮಾತನಾಡಿದ ಅವರು, ಅನೇಕ ಸಚಿವ ಸಂಪುಟ ಸದಸ್ಯರು ಕರೆ ಮಾಡಿ ಸರಕಾರಿ ಪಬ್ಲಿಕ್ ಶಾಲೆಯಲ್ಲಿ ಒಂದು ಸೀಟ್ ನೀಡುವಂತೆ ಮನವಿ ಮಾಡುತ್ತಿದ್ದಾರೆ. ಐಎಎಸ್ ಅಧಿಕಾರಿಗಳು ಕರೆ ಮಾಡಿ ಸೀಟ್ ನೀಡುವಂತೆ ಮನವಿ ಮಾಡುತ್ತಿದ್ದಾರೆ ಇದು ಅತ್ಯಂತ ಸ್ವಾಗತಾರ್ಹ ವಿಚಾರವಾಗಿದೆ. ಎಲ್ಲಾ ಶಾಲೆಗಳಲ್ಲಿ ಸೆಕ್ಷನ್ ಹೆಚ್ಚು ಮಾಡಲು ತೀರ್ಮಾನ ಮಾಡಲಾಗಿದೆ ಎಂದರು.
ಇನ್ನು ಭೌತಿಕ ತರಗತಿ ನಡೆಸುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ತಜ್ಞರು, ಪೋಷಕರು ಮತ್ತು ಶಾಲಾ ಶಿಕ್ಷಕರನ್ನು ಸೇರಿ ಮೊದಲ ಮೀಟಿಂಗ್ ಮಾಡಲಾಗಿದೆ. ಆರೋಗ್ಯ ಇಲಾಖೆಯ ಸಹಮತಿ ಕೇಳುತ್ತಿದ್ದೇವೆ. ಶಾಲೆಗಳನ್ನು ಯಾವಾಗ ಪ್ರಾರಂಭ ಮಾಡಬೇಕು ಯಾವ ರೀತಿ ಮಾಡಬೇಕು ಎಂದು ಅಕ್ಟೋಬರ್ ಮೊದಲ ವಾರದಲ್ಲಿ ತೀರ್ಮಾನ ಮಾಡಲಾಗುತ್ತದೆ. ಕಮಿಟಿಯಲ್ಲಿ ಖಾಸಗಿ ಶಾಲೆಯವರು ಕೂಡ ಜೊತೆಯಲ್ಲಿ ಇದ್ದರು ಎಂದು ಮಾಹಿತಿ ನೀಡಿದರು.