ಕರ್ನಾಟಕ

karnataka

ETV Bharat / city

Omicron variant: ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ - ಕೋವಿಡ್ ಬಗ್ಗೆ ಸಿಎಂ ಬೊಮ್ಮಾಯಿ ಸಭೆ

ಕೋವಿಡ್ ಹೊಸ ತಳಿ Omicron Variant ಭೀತಿ ಹಿನ್ನೆಲೆ ಇಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೇರಳ, ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವವರಿಗೆ RTPCR ಟೆಸ್ಟ್ ಕಡ್ಡಾಯ ಸೇರಿ ಪ್ರಮುಖ ತೀರ್ಮಾನಗಳು ತೆಗೆದುಕೊಳ್ಳಲಾಗಿದೆ.

RTPCR test must for passengers of Kerala, Maharashtra,ಕೇರಳ, ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವವರಿಗೆ RTPCR ಕಡ್ಡಾಯ
Omicron variant

By

Published : Nov 27, 2021, 7:55 PM IST

Updated : Nov 27, 2021, 10:04 PM IST

ಬೆಂಗಳೂರು: ಕೋವಿಡ್ ಹೊಸ ತಳಿ Omicron variantಭೀತಿ ಹಿನ್ನೆಲೆ ಸಿಎಂ ನೇತೃತ್ವದಲ್ಲಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಲಾಯಿತು. ಕೇರಳ, ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವವರಿಗೆ RTPCR ಟೆಸ್ಟ್ ಕಡ್ಡಾಯ ಸೇರಿದಂತೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಕೋವಿಡ್ 19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿ.ಬಿ.ಎಂ.ಪಿ ಸೇರಿದಂತೆ ಬೆಂಗಳೂರು ನಗರ ಜಿಲ್ಲೆ, ಧಾರವಾಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಕೊಡಗು, ಮೈಸೂರು ಸೇರಿ ಏಳು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.

ಸಭೆ ಬಳಿಕ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಶಾಲಾ-ಕಾಲೇಜಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಮುಂದೂಡಲು ಮಾರ್ಗಸೂಚಿ ಬಿಡುಗಡೆ ಮಾಡುತ್ತೇವೆ. ಮದುವೆ ಕಾರ್ಯಕ್ರಮದಲ್ಲಿ ಮಾಸ್ಕ್ ಹಾಕಲು ಹೆಚ್ಚಿನ ಗಮನ ಹರಿಸಲು ಸೂಚಿಸಿದ್ದೇವೆ. ರಾಜ್ಯದಲ್ಲಿ ಹೊಸ ತಳಿ ಪತ್ತೆಯಾಗಿಲ್ಲ. ಸದ್ಯಕ್ಕೆ ಯಾವುದೇ ರೀತಿಯ ನಿರ್ಬಂಧ ಹೇರಿಲ್ಲ. ಪ್ರಕರಣ ಹೆಚ್ಚಾದರೆ ಮುಂದಿನ ದಿನ ಕಠಿಣ ನಿರ್ಧಾರ ಕೈಗೊಳ್ಳಲಾಗುತ್ತದೆ. ಕಾಲೇಜುಗಳಲ್ಲಿ ಸೆಮಿನಾರ್​ಗಳನ್ನು ರದ್ದು ಮಾಡಲು ಸೂಚನೆ ನೀಡಿದ್ದೇವೆ ಎಂದರು.

ವಿಮಾನ ನಿಲ್ದಾಣಗಳಲ್ಲಿ ಹೆಚ್ಚಿನ ಕೋವಿಡ್ ಪರೀಕ್ಷೆ ಮಾಡಲು ಸೂಚಿಸಿದ್ದೇವೆ. ಕ್ರಿಸ್ಮಸ್, ನ್ಯೂ ಇಯರ್ ಸಂಬಂಧ ಮತ್ತೊಮ್ಮೆ ಸಿಎಂ ನೇತೃತ್ವದಲ್ಲಿ ಸಭೆ ಮಾಡಲಾಗುತ್ತದೆ. ಬೂಸ್ಟರ್ ಡೋಸ್ ಬಗ್ಗೆ ಕೇಂದ್ರ ಸರ್ಕಾರಕ್ಕೆ ವಿನಂತಿ ಮಾಡಲಾಗುತ್ತದೆ. ಫ್ರಂಟ್ ಲೈನ್ ವಾರಿಯರ್ಸ್​ಗೆ ಬೂಸ್ಟರ್ ಡೋಸ್ ಕೊಡುವ ನಿಟ್ಟಿನಲ್ಲಿ ಮನವಿ ಮಾಡಲು ನಿರ್ಧರಿಸಲಾಗಿದೆ ಎಂದರು.

ಕಂದಾಯ ಸಚಿವ ಆರ್.ಅಶೋಕ್ ಮಾಹಿತಿ
ಸಭೆಯಲ್ಲಿ ಕೈಗೊಂಡ ಪ್ರಮುಖ ತೀರ್ಮಾನಗಳೇನು?:
  • ಕೇರಳ ಮತ್ತು ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ
  • ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಿಗಿ ವಿಚಕ್ಷಣೆ ಕೈಗೊಳ್ಳುವುದು
  • ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯ ಪ್ರವೇಶಿಸುವವರಿಗೆ ಆರ್.ಟಿ.ಪಿ.ಸಿ. ಆರ್. ನೆಗೆಟಿವ್ ರಿಪೋರ್ಟ್ ಕಡ್ಡಾಯ
  • ಗಡಿ ಜಿಲ್ಲೆಗಳಲ್ಲಿ ಮೂರು ಶಿಫ್ಟ್​ಗಳಲ್ಲಿ ಕೆಲಸ ಮಾಡುವಂತೆ ಡಿಸಿಗಳಿಗೆ ಸೂಚನೆ
  • 16 ದಿನಗಳ ಹಿಂದೆ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ RTPCR ಪರೀಕ್ಷೆ ಮಾಡಿಸಬೇಕು
  • ಹಾಸ್ಟೆಲ್​ಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳಿಗೆ ನೆಗಟಿವ್ ರಿಪೋರ್ಟ್ ಬಂದ ನಂತರದ 7 ನೇ ದಿನಕ್ಕೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾಡಬೇಕು
  • ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವವರನ್ನು ಕಡ್ಡಾಯವಾಗಿ ಪರೀಕ್ಷೆಗೊಳಪಡಿಸಬೇಕು
  • ಹೋಟೇಲು, ರೆಸ್ಟೋರೆಂಟ್‌ಗಳು, ಸಿನಿಮಾ ಹಾಲ್‌ಗಳು, ಈಜುಕೊಳ, ಸಾರ್ವಜನಿಕ ಗ್ರಂಥಾಲಯ, ಮೃಗಾಲಯಗಳು ಮತ್ತು ಜೈವಿಕ ಉದ್ಯಾನವನಗಳು, ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಪಡೆದಿರಬೇಕು
  • ವೈದ್ಯಕೀಯ ಕಾಲೇಜು ಮತ್ತು ನರ್ಸಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸುವುದು
  • ಸರ್ಕಾರಿ ಕಚೇರಿಗಳಲ್ಲಿ ಹಾಗೂ ಮಾಲ್‌ಗಳಲ್ಲಿ ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆಯಬೇಕು. ಸರ್ಕಾರಿ ಕಚೇರಿ ಹಾಗೂ ಮಾಲ್‌ಗಳಲ್ಲಿಯೇ ಲಸಿಕೆ ನೀಡಲು ವ್ಯವಸ್ಥೆ ಕಲ್ಪಿಸಬೇಕು
  • ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆಗಳನ್ನು ತೀವ್ರಗೊಳಿಸುವುದು. ನೆಗಟಿವ್ ಇದ್ದವರಿಗೆ ನಗರ ಪ್ರವೇಶಕ್ಕೆ ಅನುಮತಿ
  • ಪಾಸಿಟಿವ್ ಇದ್ದವರಿಗೆ ಚಿಕಿತ್ಸೆಗೆ ಆಸ್ಪತ್ರೆಗೆ ಕಳುಹಿಸಬೇಕು
  • ಕಾಲೇಜುಗಳಲ್ಲಿ ಸೆಮಿನಾರ್​​ಗಳನ್ನು ರದ್ದು ಮಾಡಲು ಸೂಚನೆ
  • ಮದುವೆ ಕಾರ್ಯಕ್ರಮದಲ್ಲಿ ಮಾಸ್ಕ್ ಹಾಕಲು ಹೆಚ್ಚಿನ ಗಮನ ಹರಿಸಬೇಕು

ಸಭೆಯಲ್ಲಿ ಸಚಿವರಾದ ಆರ್.ಅಶೋಕ್, ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್, ಆರೋಗ್ಯ ಇಲಾಖೆ ಕಾರ್ಯದರ್ಶಿ ಟಿ.ಕೆ.ಅನಿಲ್ ಕುಮಾರ್, ಆಯುಕ್ತ ರಂದೀಪ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Last Updated : Nov 27, 2021, 10:04 PM IST

For All Latest Updates

ABOUT THE AUTHOR

...view details