ಕರ್ನಾಟಕ

karnataka

ETV Bharat / city

ನೆರೆ ಸಂತ್ರಸ್ತರಿಗೆ ಸರ್ಕಾರಿ ನೌಕರರ ಒಂದು ದಿನದ ವೇತನ ನೀಡಲು ನಿರ್ಧಾರ - ಕರ್ನಾಟಕದಲ್ಲಿ ಪ್ರವಾಹ

ನೆರೆ ಸಂತ್ರಸ್ತರಿಗೆ ನೆರವಾಗುವ ನಿಟ್ಟಿನಲ್ಲಿ ಸಿಎಂ ಪರಿಹಾರ ನಿಧಿಗೆ ಒಂದು‌ ದಿನದ ವೇತನ ಸಹಿತ ಎಲ್ಲಾ ಅಗತ್ಯ ಸಹಕಾರ ನೀಡಲು ಕರ್ನಾಟಕ ಸರ್ಕಾರಿ ನೌಕರರ ಸಂಘ ಮುಂದಾಗಿದೆ.

One day salary donate the govt employee's

By

Published : Aug 9, 2019, 4:25 AM IST

ಬೆಂಗಳೂರು: ಪ್ರವಾಹ ಸಂತ್ರಸ್ತರ ನೆರವಿಗಾಗಿ ಸಿಎಂ ಪರಿಹಾರ ನಿಧಿಗೆ ಒಂದು‌ ದಿನದ ವೇತನ ಸಹಿತ ಎಲ್ಲಾ ಅಗತ್ಯ ಸಹಕಾರ ನೀಡಲು ಕರ್ನಾಟಕ ಸರ್ಕಾರಿ ನೌಕರರ ಸಂಘ ಮುಂದಾಗಿದೆ.

ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಅವರನ್ನು ಭೇಟಿ ಮಾಡಿದ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ನೇತೃತ್ವದ ನಿಯೋಗ ಸಂತ್ರಸ್ತರಿಗೆ ಸಹಾಯಹಸ್ತ ನೀಡುವ ಭರವಸೆ ನೀಡಿದೆ. ಕಳೆದ ಬಾರಿ ಕೊಡುಗು ಪ್ರವಾಹಕ್ಕೆ ಸಂಘದಿಂದ ವತಿಯಿಂದ ನೀಡಲಾಗಿದ್ದ, ಸಂತ್ರಸ್ತ ನಿಧಿಯ ಮಾದರಿಯಲ್ಲಿ ಉತ್ತರ ಕರ್ನಾಟಕ ಪ್ರವಾಹ ಪೀಡಿತ ಜನರ ನೆರವಿಗಾಗಿ ಈ ಬಾರಿಯೂ ಸಹ ಮುಖ್ಯಮಂತ್ರಿ ಪರಿಹಾರ ನಿಧಿಗೆ ಒಂದು ದಿನದ ವೇತನ ನೀಡುವ ಕುರಿತು ಭರವಸೆ ನೀಡಿದ್ದಾರೆ.

ವಿಜಯ ಭಾಸ್ಕರ್ ಅವರನ್ನು ಭೇಟಿ ಮಾಡಿದ ಸಿ.ಎಸ್.ಷಡಕ್ಷರಿ ನೇತೃತ್ವದ ನಿಯೋಗ
ಈ ಸಂಬಂಧ ಇಂದು ಸಂಘದ ಎಲ್ಲಾ ಪದಾಧಿಕಾರಿಗಳ ಜತೆ ಸಭೆ ನಡೆಸಿ ಈ ಬಗ್ಗೆ ನಿರ್ಧಾರ‌ ಕೈಗೊಳ್ಳುವುದಾಗಿ ಸಿ.ಎಸ್.ಷಡಕ್ಷರಿ ತಿಳಿಸಿದ್ದಾರೆ. ಸರ್ಕಾರಿ ನೌಕರರ ಒಂದು ದಿನದ ವೇತನ ಅಂದಾಜು ಸುಮಾರು ₹ 150 ಕೋಟಿ ಸಂಗ್ರಹವಾಗಲಿದೆ.

ಇದೇ ವೇಳೆ ಸರ್ವ ಶಿಕ್ಷಾ ಅಭಿಯಾನದಡಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರಿಗೆ ಕಾಲಕ್ಕೆ ಸರಿಯಾಗಿ ವೇತನ ನೀಡಬೇಕು. ಕರ್ನಾಟಕ ಸರ್ಕಾರಿ ವಿಮಾ ಇಲಾಖೆ (ಕೆಜಿಐಡಿ) ದಾಖಲೆಗಳನ್ನು ಆನ್​ಲೈನ್ ಮೂಲಕ ಗಣಕೀಕರಣಗೊಳಿಸಿ ವಿಮಾನಿಧಿ ಸುಲಭವಾಗಿ ಸಿಗುವಂತೆ ಮಾಡಬೇಕು ಎಂದು ಮನವಿ ಮಾಡಿದರು.

ABOUT THE AUTHOR

...view details