ಕರ್ನಾಟಕ

karnataka

ETV Bharat / city

ಭ್ರಷ್ಟಾಚಾರದ ಗಂಗೋತ್ರಿಯ ಅಧ್ಯಕ್ಷ ಸಿಎಂ ಬೊಮ್ಮಾಯಿ: ಸಿದ್ದರಾಮಯ್ಯ - ಸಿಎಂ ಬೊಮ್ಮಾಯಿ ಭ್ರಷ್ಟಾಚಾರ ಗಂಗೋತ್ರಿಯ ಅಧ್ಯಕ್ಷ

ಕಾಂಗ್ರೆಸ್​ಗೆ ಪ್ರತಿಭಟಿಸುವ ಹಕ್ಕಿಲ್ಲ, ಆ ಪಕ್ಷ ಭ್ರಷ್ಟಾಚಾರದ ಗಂಗೋತ್ರಿ ಎಂದು ಟೀಕಿಸಿದ್ದ ಸಿಎಂ ಬೊಮ್ಮಾಯಿಗೆ ತಿರುಗೇಟು ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಬೊಮ್ಮಾಯಿ ಅವರೇ ಭ್ರಷ್ಟಾಚಾರದ ಗಂಗೋತ್ರಿಯ ಅಧ್ಯಕ್ಷ ಎಂದಿದ್ದಾರೆ.

siddaramaiah
ಸಿದ್ದರಾಮಯ್ಯ

By

Published : Apr 14, 2022, 5:36 PM IST

ಬೆಂಗಳೂರು:ಸಂವಿಧಾನಕ್ಕೆ ಅಪಮಾನ ಮಾಡುವ ಕೆಲಸವನ್ನು ಈ ಸರ್ಕಾರ ಮಾಡುತ್ತಿದೆ. ಅತ್ಯಂತ ಭ್ರಷ್ಟ ಸರ್ಕಾರ ರಾಜ್ಯದಲ್ಲಿದೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಗ್ಯ ಸಚಿವ ಸುಧಾಕರ್ ವಿರುದ್ಧವೂ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಭ್ರಷ್ಟಾಚಾರದ ಗಂಗೋತ್ರಿಯ ಅಧ್ಯಕ್ಷ ಸಿಎಂ ಬಸವರಾಜ ಬೊಮ್ಮಾಯಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದರು.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ವಿರುದ್ಧ 40% ಕಮಿಷನ್ ಆರೋಪವನ್ನು ಗುತ್ತಿಗೆದಾರ ಸಂಘ ಮಾಡಿದೆ. ನನ್ನ ಸಾವಿಗೆ ಈಶ್ವರಪ್ಪ ಕಾರಣ ಎಂದು ಗುತ್ತಿಗೆದಾರ ಸಂತೋಷ್ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂತೋಷ್ ಪಾಟೀಲ್ ತಾಯಿ, ಹೆಂಡತಿ ಸಂತೋಷ್ ಸಾವಿಗೆ ಈಶ್ವರಪ್ಪ ಕಾರಣ ಎಂದಿದ್ದಾರೆ. ಈಶ್ವರಪ್ಪರನ್ನು ವಜಾ ಮಾಡಬೇಕಾದ ಸರ್ಕಾರ ಅವರನ್ನು ಬೆಂಬಲಿಸುತ್ತಿದೆ ಎಂದು ಕಿಡಿಕಾರಿದರು.

ಕಮಿಷನ್​ ಬಗ್ಗೆ ಬಿಜೆಪಿ ವರಿಷ್ಠರಿಗೆ ಸಂತೋಷ್ ಪತ್ರ ಬರೆದಿದ್ದಾರೆ. ಕೊನೆಗೆ ಬೇಸತ್ತು ಅವರೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಚಿವ ಈಶ್ವರಪ್ಪರನ್ನು ನಿನ್ನೆಯೇ ಬಂಧಿಸಬೇಕಿತ್ತು. ಆದರೆ ಸರ್ಕಾರ ಅದನ್ನು ಮಾಡದೇ ಮಾಡಿಲ್ಲ. ಸಿಎಂ ಮನೆಗೆ ಘೇರಾವ್ ಹಾಕಲು ಮುಂದಾದಾಗ ನಮ್ಮನ್ನೇ ವಶಕ್ಕೆ ಪಡೆದುಕೊಂಡರು. ಇದು ಸರ್ಕಾರದ ಆಡಳಿತ ಎಂದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಶ್ವರಪ್ಪರನ್ನು ಬಂಧನಕ್ಕೆ ಆಗ್ರಹಿಸಿ 24 ಗಂಟೆಗಳ ಆಹೋರಾತ್ರಿ ಧರಣಿ ಮಾಡುತ್ತೇವೆ.‌ ಬಳಿಕ 5 ದಿನಗಳ ಕಾಲ 7 ತಂಡದ ಮೂಲಕ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತೇವೆ. ಈಶ್ವರಪ್ಪ ಅವರನ್ನು ಬಂಧಿಸಬೇಕು. ಕಾನೂನು ಎಲ್ಲರಿಗೂ ಒಂದೇ ಆಗಿದೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ:'ಸಂತೋಷ್ ಆತ್ಮಹತ್ಯೆ ಹಿಂದೆ ನನ್ನ ಸಿಡಿ ತಯಾರಿಸಿದ್ದ ಮಹಾನಾಯಕನ ಕೈವಾಡ'

For All Latest Updates

TAGGED:

ABOUT THE AUTHOR

...view details