ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಉಪನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣ ಅಧಿಕಾರಿಗಳು ನಿಯಮಬಾಹಿರವಾಗಿ ಶಿಕ್ಷಕರನ್ನು ಬೇರೆ ಶಾಲೆಗಳಿಗೆ ನಿಯೋಜನೆ ಮಾಡಿರುವ ಆರೋಪ ಕೇಳಿಬಂದಿದೆ. ಕೂಡಲೇ ಇವರನ್ನು ಕರ್ತವ್ಯದಿಂದ ಬಿಡುಗಡೆ ಮಾಡಿ, ಮೂಲ ಶಾಲೆಗಳಲ್ಲಿ ಕರ್ತವ್ಯಕ್ಕೆ ಹಾಜರಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಕಾನೂನು ಬಾಹಿರ ಶಿಕ್ಷಕರ ನಿಯೋಜನೆ ರದ್ದತಿಗೆ ಆದೇಶ; ತಪ್ಪಿದ್ದಲ್ಲಿ ಅಧಿಕಾರಿಗಳ ವಿರುದ್ಧ ಕ್ರಮದ ಎಚ್ಚರಿಕೆ - ಕಾನೂನು ಬಾಹಿರವಾಗಿ ಶಿಕ್ಷಕರ ನಿಯೋಜನೆ
ಮಕ್ಕಳ ಹಿತ ರಕ್ಷಣೆ ಗಮನಿಸದೆ ಶಿಕ್ಷಣ ಇಲಾಖೆಯಲ್ಲಿ ಉಪನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣ ಅಧಿಕಾರಿಗಳು ಶಿಕ್ಷಕರನ್ನು ಬೇರೆ ಸ್ಥಳಗಳಿಗೆ ನಿಯೋಜನೆ ಮಾಡಿದ್ದಾರೆ. ಇದನ್ನು ಕೂಡಲೇ ರದ್ದು ಮಾಡಬೇಕೆಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಕಾನೂನುಬಾಹಿರ ಶಿಕ್ಷಕರ ನಿಯೋಜನೆ ರದ್ದು ಮಾಡಲು ಆದೇಶ; ತಪ್ಪಿದ್ದಲ್ಲಿ ಅಧಿಕಾರಿಗಳ ವಿರುದ್ಧ ಕ್ರಮದ ಎಚ್ಚರಿಕೆ
ಮಕ್ಕಳ ಹಿತರಕ್ಷಣೆಯನ್ನೂ ಗಮನಿಸಿಲ್ಲ. ಎಲ್ಲಾ ಜಿಲ್ಲೆ, ತಾಲೂಕುಗಳಲ್ಲಿ ನಿಯೋಜನೆ ಮೇಲೆ ಕಚೇರಿ, ಶಾಲೆಗಳಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಸಹ ಶಿಕ್ಷಕರನ್ನು ನಿಯೋಜಿಸಲಾಗಿದೆ.
ಈ ಕೂಡಲೇ ಇವರನ್ನು ಕರ್ತವ್ಯದಿಂದ ಬಿಡುಗಡೆ ಮಾಡಿ, ಮೂಲ ಶಾಲೆಗಳಲ್ಲಿ ಕೂಡಲೇ ಕರ್ತವ್ಯಕ್ಕೆ ಹಾಜರಾಗುವಂತೆ ಕ್ರಮ ಕೈಗೊಳ್ಳಿ. ಈ ಬಗ್ಗೆ ಕಚೇರಿಗೆ ವರದಿ ಮಾಡಬೇಕು. ತಪ್ಪಿದಲ್ಲಿ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದಾಗಿ ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ.