ಬೆಂಗಳೂರು: ಒಮಿಕ್ರಾನ್ ಸೋಂಕು ತೀವ್ರತೆ ಕಡಿಮೆ ಮಾಡುವ ನಿಟ್ಟಿನಲ್ಲಿ ಈಗಾಗಲೇ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಈ ಮಧ್ಯೆ ಒಮಿಕ್ರಾನ್ ರೂಪಾಂತರಿ ಮೂರನೇ ಅಲೆಗೆ ಕಾರಣವಾಗಬಹುದು ಎಂಬ ಕಾರಣಕ್ಕೆ ರಾಜ್ಯ ಸರ್ಕಾರ ಹಾಗೂ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮ ಕೈಗೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಸರಣಿ ಸಭೆಗಳನ್ನು ನಡೆಸಲಾಗುತ್ತಿದೆ.
ಸೋಮವಾರ ಸಭೆ ಬಳಿಕ ಮಾತಾನಾಡಿದ ಆರೋಗ್ಯ ಇಲಾಖೆ ಆಯುಕ್ತ ರಂದೀಪ್, ಆರೋಗ್ಯ ಸಚಿವರು ಮೂರನೇ ಅಲೆ ಬಗ್ಗೆ ಮಾಹಿತಿ ತೆಗೆದುಕೊಳ್ಳಲು ಸೂಚನೆ ನೀಡಿದ್ದಾರೆ. ಒಂದು ವೇಳೆ ಮೂರನೇ ಅಲೆ ಎದುರಾದರೆ ತೆಗೆದುಕೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚೆ ಮಾಡಲು ಸೂಚಿಸಿದ್ದರು. ಆಕ್ಸಿಜನ್ ಕೊರತೆ, ಔಷಧ, ಬೆಡ್ಗಳ ಲಭ್ಯತೆ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ಪರಿಶೀಲನೆ ಮಾಡಿದ್ದೇವೆ ಎಂದಿದ್ದಾರೆ.