ಬೆಂಗಳೂರು: ಬಿಡಿಎ ಅಧ್ಯಕ್ಷ ಮತ್ತು ಶಾಸಕ ಎಸ್.ಆರ್.ವಿಶ್ವನಾಥ್ ಅವರ ನೆರವಿನಿಂದ ಯಲಹಂಕದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಬಹುದಾಗಿದ್ದ ರೋಗಿಗಳ ಪರದಾಟ ತಪ್ಪಿದೆ.
ಯಲಹಂಕದ ಅಪೂರ್ವ ಆಸ್ಪತ್ರೆಯಲ್ಲಿ ಒಟ್ಟು 28 ಕೋವಿಡ್ ರೋಗಿಗಳು ದಾಖಲಾಗಿದ್ದರು. ಆದ್ರೆ ಆಸ್ಪತ್ರೆಯಲ್ಲಿ ಬೆಳಗ್ಗೆ ಆಮ್ಲಜನಕದ ಕೊರತೆ ಎದುರಾಗಿತ್ತು. ವಿಷಯ ತಿಳಿದ ವಿಶ್ವನಾಥ್ ತಕ್ಷಣವೇ ಆಮ್ಲಜನಕದ ಸಿಲಿಂಡರ್ ವ್ಯವಸ್ಥೆ ಮಾಡಿದ್ದರು. ಸಂಜೆಯ ವೇಳೆಗೆ ಮತ್ತೆ ಆಮ್ಲಜನಕದ ಕೊರತೆ ಉಂಟಾಗಿತ್ತು. ಈ ಬಗ್ಗೆ ಮತ್ತೆ ಮಾಹಿತಿ ಪಡೆದ ವಿಶ್ವನಾಥ್, ನೇರವಾಗಿ ಆಸ್ಪತ್ರೆಗೆ ತೆರಳಿ ಪರಿಸ್ಥಿತಿ ಅವಲೋಕಿಸಿ ಕೂಡಲೇ ಅಗತ್ಯವಿರುವಷ್ಟು ಆಮ್ಲಜನಕದ ಸಿಲಿಂಡರ್ ವ್ಯವಸ್ಥೆ ಮಾಡಿ ಎದುರಾಗಬಹುದಾಗಿದ್ದ ಅನಾಹುತ ತಪ್ಪಿಸಿದ್ದಾರೆ.
ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆ: ಅನಾಹುತ ತಪ್ಪಿಸಿದ ಶಾಸಕ ವಿಶ್ವನಾಥ್ - ಶಾಸಕ ವಿಶ್ವನಾಥ್
ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆ ಬಗ್ಗೆ ವೈದ್ಯರು ನನ್ನ ಗಮನಕ್ಕೆ ತಂದ ತಕ್ಷಣ ನಾನು ಮತ್ತು ಪೊಲೀಸ್ ಅಧಿಕಾರಿಗಳು ದೊಡ್ಡಬಳ್ಳಾಪುರ ಮತ್ತು ಚಿಕ್ಕ ಜಾಲದಲ್ಲಿರುವ ಘಟಕಗಳಿಂದ ಸಿಲಿಂಡರ್ ತರಿಸಿ ರೋಗಿಗಳಿಗೆ ತೊಂದರೆ ಆಗುವುದನ್ನು ತಪ್ಪಿಸಿದ್ದೇನೆ ಎಂದು ವಿಶ್ವನಾಥ್ ತಿಳಿಸಿದರು.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ವಿಶ್ವನಾಥ್, ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆ ಬಗ್ಗೆ ವೈದ್ಯರು ನನ್ನ ಗಮನಕ್ಕೆ ತಂದ ತಕ್ಷಣ ನಾನು ಮತ್ತು ಪೊಲೀಸ್ ಅಧಿಕಾರಿಗಳು ದೊಡ್ಡಬಳ್ಳಾಪುರ ಮತ್ತು ಚಿಕ್ಕ ಜಾಲದಲ್ಲಿರುವ ಘಟಕಗಳಿಂದ ಸಿಲಿಂಡರ್ ತರಿಸಿ ರೋಗಿಗಳಿಗೆ ತೊಂದರೆ ಆಗುವುದನ್ನು ತಪ್ಪಿಸಿದ್ದೇನೆ ಎಂದು ತಿಳಿಸಿದರು.
ಯಲಹಂಕದ ವಿವಿಧ ಖಾಸಗಿ ಆಸ್ಪತ್ರೆಗಳ ಆಡಳಿತ ಮಂಡಳಿಗಳ ಮನವೊಲಿಸಿ ಅಪೂರ್ವ ಆಸ್ಪತ್ರೆಯಲ್ಲಿ ದಾಖಲಾಗಿದ್ದ 28 ಸೋಂಕಿತರ ಪೈಕಿ 12 ಸೋಂಕಿತರನ್ನು ಸ್ಥಳಾಂತರ ಮಾಡಿ ಸೂಕ್ತ ಚಿಕಿತ್ಸೆ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.
ಖಾಸಗಿ ಆಸ್ಪತ್ರೆಗಳು ಯಾವುದೇ ಕಾರಣಕ್ಕೂ ತಮ್ಮ ಸಾಮರ್ಥ್ಯ ಇರುವಷ್ಟು ರೋಗಿಗಳಿಗಿಂತ ಹೆಚ್ಚು ದಾಖಲಿಸಿಕೊಳ್ಳಬಾರದು. ಸಾಮರ್ಥ್ಯಕ್ಕಿಂತ ಹೆಚ್ಚು ರೋಗಿಗಳನ್ನು ದಾಖಲಿಸಿಕೊಂಡು ಅವರ ಜೀವದ ಜತೆ ಚೆಲ್ಲಾಟವಾಡಬಾರದು ಎಂದು ವಿಶ್ವನಾಥ್ ತಿಳಿಸಿದ್ದಾರೆ.