ಬೆಂಗಳೂರು:ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕವಾಗಿರುವ ಬಾಂಬೆ ಹೈಕೋರ್ಟ್ನ ನ್ಯಾಯಮೂರ್ತಿ ಪಿ.ಬಿ. ವರಾಲೆ ಅವರು ಇಂದು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ನ್ಯಾಯಮೂರ್ತಿ ಪಿ ಬಿ ವರಾಲೆ ಅವರನ್ನು ಸೆಪ್ಟೆಂಬರ್ 28 ರಂದು ನಡೆದ ಸುಪ್ರೀಂ ಕೋರ್ಟ್ ಕೊಲಿಜಿಯಂ ಸಭೆಯಲ್ಲಿ ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯನ್ನಾಗಿ ಬಡ್ತಿ ನೀಡುವಂತೆ ಶಿಫಾರಸು ಮಾಡಲಾಗಿತ್ತು.
ಪಿಬಿ ವರಾಲೆ ಪ್ರಮಾಣ ಸ್ವೀಕಾರ ನ್ಯಾ. ವರಾಲೆ ಅವರು 1985ರ ಆಗಸ್ಟ್‌ನಲ್ಲಿ ವಕೀಲರಾಗಿ ನೋಂದಾಯಿಸಿಕೊಂಡಿದ್ದರು. ವೃತ್ತಿಯ ಆರಂಭದಲ್ಲಿ ವಕೀಲರಾದ ಎಸ್.ಎನ್. ಲೋಯಾ ಅವರ ಬಳಿ ಕಿರಿಯ ವಕೀಲರಾಗಿ ಪ್ರಾಕ್ಟಿಸ್ ಆರಂಭಿಸಿದ್ದರು.1992ರವರೆಗೆ ಔರಂಗಾಬಾದ್‌ನ ಅಂಬೇಡ್ಕರ್ ಕಾನೂನು ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿಯೂ ಕೆಲಸ ಮಾಡಿದ್ದರು. 2008ರ ಜುಲೈ 18ರಲ್ಲಿ ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು.
ಓದಿ:ಕರ್ನಾಟಕ ಹೈಕೋರ್ಟ್ ಸಿಜೆಯಾಗಿ ಪಿಬಿ ವರಾಲೆ ನೇಮಕ: ಕೇಂದ್ರದ ಅಧಿಸೂಚನೆ