ಕರ್ನಾಟಕ

karnataka

ETV Bharat / city

ಪಂಚಮಸಾಲಿ ಸಮುದಾಯದ 2-ಎ ಮೀಸಲಾತಿ ಬೇಡಿಕೆ ಬಗ್ಗೆ ವರದಿ ನೀಡಿ: ಹಿಂದುಳಿದ ವರ್ಗಗಳ ಆಯೋಗಕ್ಕೆ ಸೂಚನೆ

ಮೀಸಲಾತಿ ಬಗ್ಗೆ ಸಮಗ್ರ ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಸಿಎಂ ಫೆ.5 ರಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಕೋರಿರುತ್ತಾರೆ ಎಂದು ತಿಳಿಸಲಾಗಿದೆ.

ಪಂಚಮಸಾಲಿ ಸಮುದಾಯ
ಪಂಚಮಸಾಲಿ ಸಮುದಾಯ

By

Published : Feb 17, 2021, 2:23 AM IST

ಬೆಂಗಳೂರು: ಪಂಚಮಸಾಲಿ ಸಮುದಾಯದ 2-ಎ ಮೀಸಲಾತಿ ಬೇಡಿಕೆಯ ಬಗ್ಗೆ ಸಮಗ್ರವಾಗಿ ನಿಯಮಾನುಸಾರ ಅಧ್ಯಯನ ಮಾಡಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ.

ಕರ್ನಾಟಕ ರಾಜ್ಯದ ಲಿಂಗಾಯತ ಪಂಚಮಸಾಲಿ ಜನಾಂಗದಿಂದ ತಮ್ಮ ಜನಾಂಗವನ್ನು ಪ್ರವರ್ಗ 2ಎ ಗೆ ಸೇರಿಸುವಂತೆ ಕೋರಿ ಮನವಿಗಳು ಸರ್ಕಾರಕ್ಕೆ ಸಲ್ಲಿಕೆಯಾಗಿರುತ್ತವೆ. ರಾಜ್ಯದ ಪಂಚಮಸಾಲಿ ಜನಾಂಗದವರು ತಮ್ಮ ಜನಾಂಗ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ಔದ್ಯೋಗಿಕವಾಗಿ ಹಿಂದುಳಿದಿದೆ. ಸಮಾಜದ ಬಡವರಿಗೆ ತೊಂದರೆಯಾಗಿರುವುದರಿಂದ, ತಮ್ಮ ಜನಾಂಗವನ್ನು ಹಿಂದುಳಿದ ವರ್ಗ 2-ಎ ಮೀಸಲಾತಿಗೆ ಒಳಪಡಿಸಲು ಮನವಿ ಮಾಡಿರುತ್ತಾರೆ. ಕಾರಣ ಈ ಬಗ್ಗೆ ಸಮಗ್ರ ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಸಿಎಂ ಫೆ.5 ರಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಕೋರಿರುತ್ತಾರೆ ಎಂದು ತಿಳಿಸಲಾಗಿದೆ.

ಪಂಚಮಸಾಲಿ ಸಮುದಾಯದ 2-ಎ ಮೀಸಲಾತಿ ಬೇಡಿಕೆ ಬಗ್ಗೆ ವರದಿ ನೀಡಿ: ಹಿಂದುಳಿದ ವರ್ಗಗಳ ಆಯೋಗಕ್ಕೆ ಸೂಚನೆ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಕಾಯ್ದೆ-1995 ರಡಿಯಲ್ಲಿ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಮೃತಿಗಳ ಬಗ್ಗೆ ಸಮೀಕ್ಷೆ ನಡೆಸುವುದು. ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ನಾಗರಿಕರ ವರ್ಗಗಳನ್ನು ಗುರುತಿಸುವುದು ಮತ್ತು ಅವಶ್ಯಕ ಕ್ರಮಗಳನ್ನು ತೆಗೆದುಕೊಳ್ಳುವುದಕ್ಕಾಗಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡುವ ಕಾರ್ಯವನ್ನು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ವಹಿಸಲಾಗಿರುತ್ತದೆ. ಹೀಗಾಗಿ ಸಮಗ್ರ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.

ABOUT THE AUTHOR

...view details