ಕರ್ನಾಟಕ

karnataka

ETV Bharat / city

ರಾಜೀನಾಮೆ ನೀಡಿರುವವರ ಮನವೊಲಿಕೆ ಯತ್ನ ನಡೆಯುತ್ತಿದೆ: ಡಿಸಿಎಂ ಪರಮೇಶ್ವರ್ - mla

ರಾಜೀನಾಮೆ ಕೊಟ್ಟಿರುವ ಶಾಸಕರನ್ನ ಸಂಪರ್ಕಿಸಿದ್ದೇವೆ. ಅವರನ್ನು ಮನವೊಲಿಸಲು ಸತತ ಪ್ರಯತ್ನ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.

param

By

Published : Jul 7, 2019, 2:55 PM IST

ಬೆಂಗಳೂರು:ರಾಜೀನಾಮೆ ನೀಡಿ ಮುಂಬೈಗೆ ತೆರಳಿರುವ ಶಾಸಕರ ಮನವೊಲಿಸುವ ಕಾರ್ಯ ಸತತವಾಗಿ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.

ಇದೀಗ ಬೆಂಗಳೂರಿಗೆ ಆಗಮಿಸಿರುವ ವೇಣುಗೋಪಾಲ್ ಅವರನ್ನ ಈಗ ಭೇಟಿ ಮಾಡಲು ತೆರಳುತ್ತಿದ್ದೇನೆ. ನಂತರ ಎಲ್ಲ ಮುಖಂಡರ ಸಮ್ಮುಖದಲ್ಲಿ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದ್ರು.

ಸಭೆಯಲ್ಲಿ ಇಲ್ಲಿಯವರೆಗೂ ಏನಾಗಿದೆ, ಶಾಸಕರು ಹೊರಗೆ ಹೋಗಿರುವ ವಿಚಾರ ಕುರಿತು ಚರ್ಚೆ ಮಾಡುತ್ತೇವೆ. ರಾಜೀನಾಮೆ ಕೊಟ್ಟಿರುವ ಶಾಸಕರನ್ನ ಸಂಪರ್ಕ ಮಾಡಿದ್ದೇವೆ. ಅವರನ್ನು ಮನವೊಲಿಸಲು ಸತತ ಪ್ರಯತ್ನ ನಡೆಸಲಾಗುವುದು ಎಂದರು.

ರಾಮಲಿಂಗಾರೆಡ್ಡಿ ಅಸಮಾಧಾನ ವಿಚಾರ ಕುರಿತು ಮಾತನಾಡಿದ ಅವರು, ನನ್ನ ಮೇಲೆ ಅಸಮಾಧಾನ ಮಾಡಿಕೊಳ್ಳುವಂತಹದ್ದು ಇಲ್ಲ. ಎಲ್ಲರದ್ದೂ ಒಂದೊಂದು ಅಭಿಪ್ರಾಯ ಇರುತ್ತೆ. ಆದರೆ, ಆ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತೆ ಎಂದು ಹೇಳಿದರು.

ಇನ್ನೂ 8 ಜನ ರಾಜೀನಾಮೆ ನೀಡ್ತಾರೆ ಎಂಬ ಬಿ.ಸಿ. ಪಾಟೀಲ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಅಂತಹದ್ದೇನು ಇಲ್ಲ. ಎಲ್ಲದಕ್ಕೂ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದರು.

ABOUT THE AUTHOR

...view details