ಬೆಂಗಳೂರು:ಉಪ ಸಭಾಪತಿ ಎಸ್ ಎಲ್ ಧರ್ಮೇಗೌಡ ಕೊಠಡಿಯಲ್ಲಿ ಇಂದು ವಿಧಾನಪರಿಷತ್ ಜೆಡಿಎಸ್ ಸದಸ್ಯರ ಸಭೆ ನಡೆಯಿತು.
ಪರಿಷತ್ ಕಲಾಪಗಳಲ್ಲಿ ಪಾಲ್ಗೊಳ್ಳುವಿಕೆ ಹಿನ್ನೆಲೆ.. ಇಂದು ಪರಿಷತ್ ಜೆಡಿಎಸ್ ಸದಸ್ಯರ ಸಭೆ - JDS Members
ಉಪ ಸಭಾಪತಿ ಎಸ್ ಎಲ್ ಧರ್ಮೇಗೌಡ ಕೊಠಡಿಯಲ್ಲಿ ಇಂದು ವಿಧಾನಪರಿಷತ್ ಜೆಡಿಎಸ್ ಸದಸ್ಯರ ಸಭೆ ನಡೆಯಿತು.
ಪರಿಷತ್ ಕಲಾಪಗಳಲ್ಲಿ ಪಾಲ್ಗೊಳ್ಳುವಿಕೆ ಹಿನ್ನೆಲೆ...ಇಂದು ವಿಧಾನಪರಿಷತ್ ಜೆಡಿಎಸ್ ಸದಸ್ಯರ ಸಭೆ
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಪರಿಷತ್ ಸದಸ್ಯ ಟಿ ಎ ಶರವಣ, ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ನೇತೃತ್ವದಲ್ಲಿ ಜೆಡಿಎಸ್ನ ಎಲ್ಲಾ ಎಂಎಲ್ಸಿಗಳು ಸಭೆ ಸೇರಿದ್ದೆವು. ಪಕ್ಷ ಸಂಘಟನೆ ಮತ್ತು ನಾಳಿನ ಪರಿಷತ್ ಕಲಾಪಗಳಲ್ಲಿ ಪಾಲ್ಗೊಳ್ಳುವುದು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗಿದೆ.
ಮೈತ್ರಿ ಸರ್ಕಾರವಿದ್ದ ಸಂದರ್ಭದಲ್ಲಿ ಮತ್ತು ಪ್ರಸ್ತುತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ನಡೆದಿದೆ. ನೆರೆ ಸಂತ್ರಸ್ತರಿಗೆ ಹೇಗೆ ನೆರವಾಗಬೇಕೆಂಬುದರ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ ಎಂದರು.