ಬೆಂಗಳೂರು : ಇಂದು ರಾತ್ರಿಯಿಂದ 14 ದಿನಗಳ ಕಾಲ ಕೊರೊನಾ ಕರ್ಫ್ಯೂ ಹಿನ್ನೆಲೆ ಸಿಟಿ ಮಾರ್ಕೆಟ್ನಲ್ಲಿ ಜನ ಸಾಗರ ಕಂಡು ಬರುತ್ತಿದೆ. ಹೂವು, ಹಣ್ಣು, ತರಕಾರಿ ಖರೀದಿಸಲು ಜನ ಮುಗಿಬಿದ್ದಿದ್ದಾರೆ.
ಸಾಮಾಜಿಕ ಅಂತರವಿಲ್ಲದೆ ತಮಗೆ ಬೇಕಾದ ವಸ್ತುಗಳನ್ನು ಖರೀದಿ ಮಾಡಲು ಬೆಳಗ್ಗೆನಿಂದಲೇ ಜನರು ಜಮಾಯಿಸಿದ್ದಾರೆ. ನಾಳೆಯಿಂದ ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ಅಂಗಡಿಗಳನ್ನ ತೆರೆಯಲು ಅವಕಾಶ ನೀಡಿದ್ದರೂ ಹೋಲ್ಸೇಲ್ ಬೆಲೆಯಲ್ಲಿ ಖರೀದಿಸಲು ಮುಗಿ ಬೀಳುತ್ತಿದ್ದಾರೆ.