ಬೆಂಗಳೂರು:ಪಂಚರಾಜ್ಯ ಚುನಾವಣೆ ಬಳಿಕ ಎರಡು ವಾರಗಳವರೆಗೆ ನಿತ್ಯ ಏರಿಕೆಯಾಗುತ್ತಿದ್ದ ಪೆಟ್ರೋಲ್, ಡೀಸೆಲ್ ದರದಲ್ಲಿ ಕಳೆದ ಒಂದು ತಿಂಗಳಿನಿಂದ ಸ್ಥಿರವಾಗಿದೆ. ಬೆಂಗಳೂರು, ಹುಬ್ಬಳ್ಳಿ ಸೇರಿ ರಾಜ್ಯದ ಪ್ರಮುಖ ನಗರಗಳ ಇಂಧನ ದರ ಎಷ್ಟಿದೆ? ಈ ಕುರಿತ ಮಾಹಿತಿ ಇಲ್ಲಿದೆ.
ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಒಂದು ಲೀಟರ್ಗೆ 105.41 ರೂ.ಇದ್ದು, ಲೀಟರ್ ಡೀಸೆಲ್ ಬೆಲೆ 96.67 ರೂ. ಇದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ರೂ. 120.51, ಡೀಸೆಲ್ ರೂ. 104.77ಕ್ಕೆ ಮಾರಾಟವಾಗುತ್ತಿದೆ. ರಾಜ್ಯದಲ್ಲಿ ಮಂಗಳೂರು ಹೊರತುಪಡಿಸಿ ಉಳಿದ ನಗರಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಆದ್ರೆ ಮಂಗಳೂರಲ್ಲಿ ಪೆಟ್ರೋಲ್ ದರದಲ್ಲಿ 0.78 ಪೈಸೆ ಹಾಗೂ ಡೀಸೆಲ್ ದರದಲ್ಲಿ 0.70 ಪೈಸೆ ಏರಿಕೆಯಾಗಿದೆ.