ಬೆಂಗಳೂರು: ದೇಶದಲ್ಲಿ ಇಂಧನ ದರಗಳು ನಿತ್ಯವೂ ಪರಿಷ್ಕರಿಸಲ್ಪಡುತ್ತವೆ. ತೈಲ ಬೆಲೆಯು ಅಬಕಾರಿ ಸುಂಕ, ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಮತ್ತು ಡೀಲರ್ ಕಮಿಷನ್ ಒಳಗೊಂಡಿರುತ್ತದೆ. ವ್ಯಾಟ್ ರಾಜ್ಯದಿಂದ ರಾಜ್ಯಕ್ಕೆ ವಿಭಿನ್ನವಾಗಿರುತ್ತದೆ. ತೈಲ ಬೆಲೆಯಲ್ಲಿ ಇಂದು ಯಾವುದೇ ಬದಲಾವಣೆ ಆಗಿಲ್ಲ.
ಮಂಗಳೂರಲ್ಲಿ ಪೆಟ್ರೋಲ್ ದರದಲ್ಲಿ 9 ಪೈಸೆ ಹಾಗೂ ಡೀಸೆಲ್ ದರದಲ್ಲಿ 8 ಪೈಸೆ ಇಳಿಕೆಯಾಗಿದೆ. ಆದರೆ ದಾವಣಗೆರೆಯಲ್ಲಿ ಪೆಟ್ರೋಲ್ ದರದಲ್ಲಿ 6 ಪೈಸೆ, ಡೀಸೆಲ್ ದರದಲ್ಲಿ 26 ಪೈಸೆ ಏರಿಕೆಯಾಗಿದೆ. ಇನ್ನುಳಿದ ನಗರಗಳಲ್ಲಿ ತೈಲ ದರ ಸ್ಥಿರವಾಗಿದೆ.