ಕರ್ನಾಟಕ

karnataka

ETV Bharat / city

ಫೋನ್​ ಕದ್ದಾಲಿಕೆ ಪ್ರಕರಣ: ತನಿಖೆಯನ್ನು ಅಧಿಕೃತವಾಗಿ ಸಿಬಿಐಗೆ ಒಪ್ಪಿಸಿದ ರಾಜ್ಯ ಸರ್ಕಾರ - state governamet

ಫೋನ್ ಕದ್ದಾಲಿಕೆ ಪ್ರಕರಣವನ್ನು ರಾಜ್ಯ ಸರ್ಕಾರ ಅಧಿಕೃತವಾಗಿ ಸಿಬಿಐ ತನಿಖೆಗೆ ವಹಿಸಿ ಆದೇಶ ಹೊರಡಿಸಿದೆ.

phone tapping case: State government officially handed over to CBI

By

Published : Aug 19, 2019, 11:38 PM IST

Updated : Aug 19, 2019, 11:50 PM IST

ಬೆಂಗಳೂರು:ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಐಪಿಎಸ್ ಅಧಿಕಾರಿಗಳ ಫೋನ್ ಕದ್ದಾಲಿಕೆ ಪ್ರಕರಣವನ್ನು ರಾಜ್ಯ ಸರ್ಕಾರ ಅಧಿಕೃತವಾಗಿ ಸಿಬಿಐ ತನಿಖೆಗೆ ವಹಿಸಿದೆ.

2018ರ ಆಗಸ್ಟ್​ 1ರಿಂದ ಈವರೆಗೂ ಕಾನೂನುಬಾಹಿರವಾಗಿ ಆಡಳಿತ ಹಾಗೂ ಪ್ರತಿಪಕ್ಷಗಳ ನಾಯಕರು ಮತ್ತು ಅವರ ಸಂಬಂಧಿಕರು ಹಾಗೂ ಸಹವರ್ತಿಗಳ ಫೋನ್ ಕದ್ದಾಲಿಕೆ ಮಾಡಿರುವ ಆರೋಪ ಕೇಳಿ ಬಂದಿತ್ತು. ಫೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲ ಸಾಕ್ಷ್ಯಾಧಾರಗಳನ್ನು ಸಿಬಿಐಗೆ ನೀಡಲು ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್. ರಾಜು ಅವರಿಗೆ ಆದೇಶಿಸಲಾಗಿದೆ.

ನಗರ ಪೊಲೀಸ್ ಆಯುಕ್ತ ಹುದ್ದೆಗಾಗಿ ಐಪಿಎಸ್ ಅಧಿಕಾರಿಯಾಗಿರುವ ಭಾಸ್ಕರ್ ರಾವ್ ಅವರ ಫೋನ್ ಕದ್ದಾಲಿಕೆ ಮಾಡಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು. ಅಲ್ಲದೆ, ಹಿಂದಿನ ದೋಸ್ತಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜಕೀಯ ನಾಯಕರ ಫೋನ್ ಕದ್ದಾಲಿಕೆ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಈ ಆರೋಪವನ್ನು ಕುಮಾರಸ್ವಾಮಿ ಅವರು ತಳ್ಳಿ ಹಾಕಿದ್ದರು. ಕ್ಷಿಪ್ರ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಫೋನ್ ಟ್ಯಾಪಿಂಗ್ ಪ್ರಕರಣವನ್ನು ಸಿಬಿಐ ತನಿಖೆಗೆ ರಾಜ್ಯ ಸರ್ಕಾರ ಒಪ್ಪಿಸಿದೆ.

ಸಿಬಿಐ ತನಿಖೆಗೆ ಆದೇಶ: ರಾಜ್ಯದಲ್ಲಿ ನಡೆದಿದೆ ಎನ್ನಲಾದ ದೂರವಾಣಿ ಕರೆಗಳ ಕದ್ದಾಲಿಕೆ ಪ್ರಕರಣವನ್ನು ಸರ್ಕಾರ ಸಿಬಿಐಗೆ ವಹಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಅಧಿಕೃತವಾಗಿ ಆದೇಶ ಹೊರಡಿಸಿದ್ದಾರೆ. ಸರ್ಕಾರದ ಶಿಫಾರಸ್ಸಿನ ಹಿನ್ನೆಲೆಯಲ್ಲಿ ನಿರ್ದೇಶಿಸಲಾಗಿದೆ.

2018ರ ಆಗಸ್ಟ್ 1 ರಿಂದ ಇಲ್ಲಿಯವರೆಗೂ ನಡೆದಿರಬಹುದಾದ ದೂರವಾಣಿ ಕದ್ದಾಲಿಕೆ ಕುರಿತು ತನಿಖೆ ನಡೆಸಲಾಗುತ್ತದೆ. ಸೈಬರ್ ಕ್ರೈಮ್​ನಲ್ಲಿ ದಾಖಲಾಗಿರುವ ಪ್ರಕರಣದ ಸಂಖ್ಯೆ 6963/2019 ಇದಾಗಿದೆ. ಪ್ರಕರಣದಲ್ಲಿ ಯಾರೆಲ್ಲ ಅಧಿಕಾರಿಗಳ ಹೆಸರು ಕೇಳಿಬಂದಿದೆ? ಯಾರ ಫೋನ್‌ ಕದ್ದಾಲಿಕೆಯಾಗಿದೆ? ಹೇಗೆ ಸೋರಿಕೆಯಾಗಿದೆ? ಎಂಬೆಲ್ಲ ಪ್ರಶ್ನೆಗಳನ್ನು ಮುಂದಿಟ್ಟುಕೊಂಡು ವಿಚಾರಣೆ ಆರಂಭಿಸಲಿದ್ದಾರೆ.

Last Updated : Aug 19, 2019, 11:50 PM IST

ABOUT THE AUTHOR

...view details