ಕರ್ನಾಟಕ

karnataka

ETV Bharat / city

ಫೋನ್ ಕದ್ದಾಲಿಕೆ ಪ್ರಕರಣ.. ಡಿಜಿಪಿ, ಗುಪ್ತಚರ ಅಧಿಕಾರಿಗಳ ಜೊತೆ ಸಿಎಂ ಚರ್ಚೆ..

ಫೋನ್ ಕದ್ದಾಲಿಕೆ ಪ್ರಕರಣ ಕುರಿತು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಇಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ನೀಲಮಣಿ ಎನ್. ರಾಜು, ಗುಪ್ತಚರ ವಿಭಾಗದ ಎಡಿಜಿಪಿ ಕಮಲ್ ಪಂತ್‌ ಹಾಗೂ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವಡಗಿ ಅವರನ್ನು ಕರೆಯಿಸಿಕೊಂಡು‌ ಚರ್ಚೆ ನಡೆಸಿದರು.

ಬಿ.ಎಸ್ ಯಡಿಯೂರಪ್ಪ

By

Published : Aug 19, 2019, 5:34 PM IST

ಬೆಂಗಳೂರು: ದೂರವಾಣಿ ಕದ್ದಾಲಿಕೆ ಪ್ರಕರಣವನ್ನು‌ ಸಿಬಿಐಗೆ ಹಸ್ತಾಂತರ ಮಾಡುವ ಸಂಬಂಧ ಕಾನೂನಾತ್ಮಕ ಅಂಶಗಳ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮಹತ್ವದ ಮಾತುಕತೆ ನಡೆಸಿದರು.

ಡಿಜಿಪಿ, ಗುಪ್ತಚರ ಅಧಿಕಾರಿಗಳ ಜೊತೆ ಸಿಎಂ ಚರ್ಚೆ..

ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸಕ್ಕೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ನೀಲಮಣಿ ಎನ್.ರಾಜು, ಗುಪ್ತಚರ ವಿಭಾಗದ ಎಡಿಜಿಪಿ ಕಮಲ್ ಪಂತ್‌ ಹಾಗೂ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವಡಗಿ ಅವರನ್ನು ಕರೆಯಿಸಿಕೊಂಡು‌ ಚರ್ಚೆ ನಡೆಸಿದರು.

ನಾಳೆ ಸಂಪುಟ ರಚಣೆ ನಂತರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಫೋನ್ ಟ್ಯಾಪಿಂಗ್ ಪ್ರಕರಣ ಸಿಬಿಐಗೆ ಹಸ್ತಾಂತರ ಮಾಡುವ ಸಂಬಂಧ ಅಧಿಸೂಚನೆ ಹೊರಡಿಸಲು ನಿರ್ಧಾರ ಕೈಗೊಳ್ಳಲಿದ್ದು, ಅದಕ್ಕೆ ಪೂರ್ವಭಾವಿಯಾಗಿ ಪೊಲೀಸ್, ಗುಪ್ತಚರ ಮತ್ತು ಅಡ್ವೋಕೇಟ್ ಜನರಲ್ ಜೊತೆ ಸಿಎಂ ಚರ್ಚೆ ನಡೆಸಿದರು ಎಂದು ತಿಳಿದು ಬಂದಿದೆ.

ABOUT THE AUTHOR

...view details