ಕರ್ನಾಟಕ

karnataka

ETV Bharat / city

ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಪ್ರಶ್ನಿಸಿ ಪಿಐಎಲ್: ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದ ಸರ್ಕಾರ

ಭೂ ಸುಧಾರಣೆ ತಿದ್ದುಪಡಿ ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಇಂದು ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕ ನೇತೃತ್ವದ ವಿಭಾಗೀಯ ಪೀಠದ ವಿಚಾರಣೆ ನಡೆಸಿತು. ಈ ವೇಳೆ ಸರ್ಕಾರದ ಪರ ಹಾಜರಾದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ, ಎಲ್ಲ ಅರ್ಜಿಗಳಿಗೆ ಸಮಗ್ರ ಆಕ್ಷೇಪಣೆ ಸಲ್ಲಿಸಲಾಗುವುದು. ಅದಕ್ಕಾಗಿ 4 ವಾರ ಕಾಲಾವಕಾಶ ನೀಡಬೇಕಿದೆ ಎಂದು ಕೋರಿದರು.

pil-in-question-on-land-reform-act-amendment
ಭೂ ಸುಧಾರಣೆ ಕಾಯ್ದೆ ತಿದ್ದುಪಡಿ

By

Published : Mar 2, 2021, 10:41 PM IST

ಬೆಂಗಳೂರು : ಕರ್ನಾಟಕ ಭೂಸುಧಾರಣೆ ತಿದ್ದುಪಡಿ ಕಾಯ್ದೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳಿಗೆ ಸಮಗ್ರ ಆಕ್ಷೇಪಣೆ ಸಲ್ಲಿಸಲು ನಾಲ್ಕು ವಾರ ಕಾಲಾವಕಾಶ ನೀಡುವಂತೆ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮನವಿ ಮಾಡಿದೆ.

ಭೂ ಸುಧಾರಣೆ ತಿದ್ದುಪಡಿ ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಇಂದು ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕ ನೇತೃತ್ವದ ವಿಭಾಗೀಯ ಪೀಠದ ವಿಚಾರಣೆ ನಡೆಸಿತು. ಈ ವೇಳೆ ಸರ್ಕಾರದ ಪರ ಹಾಜರಾದ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ, ಎಲ್ಲ ಅರ್ಜಿಗಳಿಗೆ ಸಮಗ್ರ ಆಕ್ಷೇಪಣೆ ಸಲ್ಲಿಸಲಾಗುವುದು. ಅದಕ್ಕಾಗಿ 4 ವಾರ ಕಾಲಾವಕಾಶ ನೀಡಬೇಕಿದೆ ಎಂದು ಕೋರಿದರು.

ಇದೇ ವೇಳೆ ಅರ್ಜಿದಾರರ ಪರ ವಕೀಲರು, ಕರ್ನಾಟಕ ಭೂಸುಧಾರಣೆ ತಿದ್ದುಪಡಿ ಕಾಯ್ದೆಗೆ ತಡೆಯಾಜ್ಞೆ ನೀಡಬೇಕು ಎಂದು ಮನವಿ ಮಾಡಿದರು. ಮಧ್ಯಪ್ರವೇಶಿಸಿದ ಪೀಠ, ಅರ್ಜಿಯಲ್ಲಿ ಕಾಯ್ದೆಯ ಸಂವಿಧಾನ ಮಾನ್ಯತೆಯನ್ನು ಪ್ರಶ್ನಿಸಲಾಗಿದೆ.

ಈ ಕುರಿತು ಸವಿವರವಾದ ವಿಚಾರಣೆ ನಡೆಸದೆ ಯಾವುದೇ ತೀರ್ಮಾನ ಕೈಗೊಳ್ಳಲಾಗದು. ಸರ್ಕಾರ ಎಲ್ಲ ಅರ್ಜಿಗಳಿಗೆ ಸಮಗ್ರ ಆಕ್ಷೇಪಣೆ ಸಲ್ಲಿಸಲಿ. ನಂತರ ಅರ್ಜಿ ವಿಚಾರಣೆ ನಡೆಸಿ ತೀರ್ಮಾನಿಸೋಣ ಎಂದು ತಿಳಿಸಿ, ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಕಾಲಾವಕಾಶ ನೀಡಿತು. ಹಾಗೆಯೇ, ಸುಗ್ರೀವಾಜ್ಞೆ ಆಧರಿಸಿ ರಾಜ್ಯ ಸರ್ಕಾರ ಕೈಗೊಳ್ಳುವ ಎಲ್ಲ ಕ್ರಮಗಳು ಅರ್ಜಿಗಳ ಕುರಿತು ನ್ಯಾಯಾಲಯ ನೀಡುವ ಅಂತಿಮ ಆದೇಶಕ್ಕೆ ಒಳಪಡಲಿದೆ ಎಂದು ಸ್ಪಷ್ಟಪಡಿಸಿ 2020ರ ಡಿ.2ರಂದು ನೀಡಿರುವ ಮಧ್ಯಂತರ ಆದೇಶವನ್ನು ವಿಸ್ತರಿಸಿತು.

ABOUT THE AUTHOR

...view details