ಕರ್ನಾಟಕ

karnataka

ETV Bharat / city

ಕೊಡವರಿಗೆ ಬಂದೂಕು ಪರವಾನಿಗೆ ವಿನಾಯಿತಿ ಪ್ರಶ್ನಿಸಿ ಪಿಐಎಲ್ : ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ - gun license exemption to kodava

2019ರ ಅಕ್ಟೋಬರ್ 29ರಂದು ಹೊರಡಿಸಿರುವ ಅಧಿಸೂಚನೆಯಲ್ಲಿ 2029ರ ಅಕ್ಟೋಬರ್ 31ರವರೆಗೆ ಕೊಡವರು ಹಾಗೂ ಜಮ್ಮಾ ಭೂಮಿ ಹೊಂದಿರುವವರಿಗೆ ಗನ್ ಲೈಸನ್ಸ್ ಪಡೆಯುವುದರಿಂದ ವಿನಾಯಿತಿ ನೀಡಲಾಗಿದೆ. ಇದು ಕಾನೂನು ಬಾಹಿರ ಕ್ರಮವಾಗಿದ್ದು, ಅಧಿಸೂಚನೆಯನ್ನು ರದ್ದುಪಡಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ..

highcourt
ಹೈಕೋರ್ಟ್ ನೋಟಿಸ್

By

Published : Jul 10, 2021, 8:38 PM IST

ಬೆಂಗಳೂರು: ಬ್ರಿಟಿಷ್ ಕಾಲದಲ್ಲಿದ್ದ ನಿಯಮಗಳನ್ನೇ ಮುಂದುವರೆಸಿ ಕೊಡವರಿಗೆ ಬಂದೂಕು ಪರವಾನಿಗೆ ಪಡೆಯಲು ವಿನಾಯಿತಿ ನೀಡಿರುವ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಮಡಿಕೇರಿಯ ಗಾಳಿಬೀಡು ನಿವಾಸಿ ಹಾಗೂ ನಿವೃತ್ತ ಸೇನಾಕಾರಿ ಕ್ಯಾಪ್ಟನ್ ವೈ ಕೆ ಚೇತನ್ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ. ಎಸ್ ಓಕ ಹಾಗೂ ನ್ಯಾ. ಸೂರಜ್ ಗೋವಿಂದರಾಜ್ ಅವರಿದ್ದ ವಿಭಾಗೀಯ ಪೀಠ, ಪ್ರತಿವಾದಿಗಳಾದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿ, ಆಕ್ಷೇಪಣೆ ಸಲ್ಲಿಸಲು ಸೂಚಿಸಿದೆ.

ಅರ್ಜಿದಾರರ ಮನವಿ :ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ 1959ರ ನಿಯಮಗಳ ಪ್ರಕಾರ ಬಂದೂಕು, ಪಿಸ್ತೂಲ್, ಡಬ್ಬಲ್ ಬ್ಯಾರಲ್​ ಗನ್ ಸೇರಿದಂತೆ ಶಸ್ತ್ರಾಸ್ತ್ರಗಳನ್ನು ಇಟ್ಟಕೊಳ್ಳಲು ಪ್ರತಿಯೊಬ್ಬರೂ ಪರವಾನಿಗೆ ಪಡೆಯಲೇಬೇಕು. ಆದರೆ, ಬ್ರಿಟಿಷ್ ಕಾಲದಲ್ಲಿ ಚಾಲ್ತಿಯಲ್ಲಿದ್ದ ನಿಯಮಗಳನ್ನೇ ಮುಂದುವರಿಸಿಕೊಂಡು ಬಂದಿರುವ ಸರ್ಕಾರಗಳು, ಕೊಡವರಿಗೆ ಹಾಗೂ ಜಮ್ಮಾ ಭೂಮಿ ಹೊಂದಿರುವವರಿಗೆ ಪರವಾನಿಗೆ ಪಡೆಯುವುದರಿಂದ ವಿನಾಯಿತಿ ನೀಡಿವೆ.

ಶಸ್ತ್ರಾಸ್ತ್ರ ಕಾಯ್ದೆ ನಿಯಮಗಳಿಂದ ಕೆಲವರಿಗಷ್ಟೇ ವಿನಾಯಿತಿ ನೀಡುವುದು ಅಸಂವಿಧಾನಿಕ. ಕೆಲವೇ ಜನರಿಗೆ ಇಂತಹ ಸೌಲಭ್ಯ ನೀಡುವುದು ಜಾತಿ, ಧರ್ಮದ ಆಧಾರದಲ್ಲಿ ತಾರತಮ್ಯ ಮಾಡಿದಂತಾಗುತ್ತದೆ. ಮೂಲತಃ ಕೊಡವ ಜನಾಂಗಕ್ಕೆ ಕತ್ತಿ, ಬಂದೂಕು ಹೊಂದುವುದು ಸಾಂಪ್ರದಾಯಿಕ ಹಕ್ಕು ಎಂಬ ಕಾರಣಕ್ಕೆ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ಇಂತಹದ್ದೊಂದು ವಿನಾಯಿತಿ ನೀಡಿದೆ.

2019ರ ಅಕ್ಟೋಬರ್ 29ರಂದು ಹೊರಡಿಸಿರುವ ಅಧಿಸೂಚನೆಯಲ್ಲಿ 2029ರ ಅಕ್ಟೋಬರ್ 31ರವರೆಗೆ ಕೊಡವರು ಹಾಗೂ ಜಮ್ಮಾ ಭೂಮಿ ಹೊಂದಿರುವವರಿಗೆ ಗನ್ ಲೈಸನ್ಸ್ ಪಡೆಯುವುದರಿಂದ ವಿನಾಯಿತಿ ನೀಡಲಾಗಿದೆ. ಇದು ಕಾನೂನು ಬಾಹಿರ ಕ್ರಮವಾಗಿದ್ದು, ಅಧಿಸೂಚನೆಯನ್ನು ರದ್ದುಪಡಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

ABOUT THE AUTHOR

...view details