ಕರ್ನಾಟಕ

karnataka

ETV Bharat / city

NEET ಮುಂದೂಡದಂತೆ ಕೋರಿ ಹೈಕೋರ್ಟ್​​ಗೆ ಪಿಐಎಲ್ : ಮೇ 27ಕ್ಕೆ ವಿಚಾರಣೆ - ನೀಟ್ ಲೇಟೆಸ್ಟ್ ಸುದ್ದಿ

ಜನವರಿಯಲ್ಲಿ ನೀಟ್ ನಡೆಸಲು ದಿನಾಂಕ ನಿಗದಿಪಡಿಸಲಾಗಿತ್ತು, ಬಳಿಕ ಪರೀಕ್ಷೆಯನ್ನು ಏಪ್ರಿಲ್​​ 18ಕ್ಕೆ ಮುಂದೂಡಲಾಗಿತ್ತು. ಇದೀಗ ಆಗಸ್ಟ್ 31ರವರೆಗೂ ಪರೀಕ್ಷೆ ನಡೆಸುವುದಿಲ್ಲ ಎಂದು ಹೇಳಲಾಗುತ್ತಿದೆ.

pil-to-high-court-on-neet-exam
NEET ಮುಂದೂಡದಂತೆ ಕೋರಿ ಹೈಕೋರ್ಟ್​​ಗೆ ಪಿಐಎಲ್ : ಮೇ 27ಕ್ಕೆ ವಿಚಾರಣೆ

By

Published : May 20, 2021, 1:48 AM IST

ಬೆಂಗಳೂರು : ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಮುಂದೂಡುವ ನಿರ್ಧಾರ ಕೈಬಿಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಒಂದು ವಾರ ಮುಂದೂಡಿದೆ.

ಹುಬ್ಬಳ್ಳಿಯ ಜಿ.ಬಿ.ಕುಲಕರ್ಣಿ ಮೆಮೋರಿಯಲ್ ಲೀಗಲ್ ಟ್ರಸ್ಟ್ ನ ಡಾ. ವಿನೋದ್ ಕುಲಕರ್ಣಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾ. ಸತೀಶ್ ಚಂದ್ರ ಶರ್ಮ ನೇತೃತ್ವದ ವಿಭಾಗೀಯಪೀಠ ಬುಧವಾರ ವಿಚಾರಣೆ ನಡೆಸಿತು. ಕೆಲಕಾಲ ವಾದ ಆಲಿಸಿದ ಪೀಠ ವಿಚಾರಣೆಯನ್ನು ಮೇ 27ಕ್ಕೆ ಮುಂದೂಡಿತು.

ಇದನ್ನೂ ಓದಿ:ಬೆಂಗಳೂರು ನಗರದಲ್ಲಿ 941 ವಾಹನಗಳು ಜಪ್ತಿ : 6 ಮಂದಿ ಮೇಲೆ ಕೇಸ್

ಅಜಿರ್ಯಲ್ಲಿ ಪ್ರಧಾನಮಂತ್ರಿ ಕಚೇರಿಯ ಪ್ರಧಾನ ಕಾರ್ಯದರ್ಶಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ರಾಷ್ಟ್ರೀಯ ವೈದ್ಯಕಿಯ ಪರೀಕ್ಷಾ ಮಂಡಳಿ ಮತ್ತು ರಾಜ್ಯ ಸರ್ಕಾರವನ್ನು ಪ್ರತಿವಾದಿಯನ್ನಾಗಿಸಲಾಗಿದೆ.

ಅರ್ಜಿದಾರರ ಮನವಿಯೇನು..?

ಜನವರಿಯಲ್ಲಿ ನೀಟ್ ನಡೆಸಲು ದಿನಾಂಕ ನಿಗದಿಪಡಿಸಲಾಗಿತ್ತು, ಬಳಿಕ ಪರೀಕ್ಷೆಯನ್ನು ಏಪ್ರಿಲ್​​ 18ಕ್ಕೆ ಮುಂದೂಡಲಾಗಿತ್ತು. ಇದೀಗ ಆಗಸ್ಟ್ 31ರವರೆಗೂ ಪರೀಕ್ಷೆ ನಡೆಸುವುದಿಲ್ಲ ಎಂದು ಹೇಳಲಾಗುತ್ತಿದೆ.

ಇದು ವೈದ್ಯಕಿಯ ಸ್ನಾತಕೋತ್ತರ ಪದವಿಯ (ಎಂಡಿ ಮತ್ತು ಎಂಎಸ್) ಆಕಾಂಕ್ಷಿಗಳ ಆತಂಕಕ್ಕೆ ಕಾರಣವಾಗಿದೆ. ಕೋವಿಡ್​ನಿಂದ ವಿದ್ಯಾಥಿರ್ಗಳ ಒಂದು ಶೈಕ್ಷಣಿಕ ವರ್ಷ ವ್ಯರ್ಥ ಮಾಡಬೇಕಾದ ಅನಿವಾರ್ಯತೆ ಉಂಟಾಗಿದೆ. ಆದ್ದರಿಂದ, ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಪರೀಕ್ಷೆ ನಡೆಸಲು ಅವಕಾಶ ಕಲ್ಪಿಸಬೇಕು ಎಂದು ಅಜಿರ್ಯಲ್ಲಿ ಕೋರಲಾಗಿದೆ.

ABOUT THE AUTHOR

...view details