ಕರ್ನಾಟಕ

karnataka

ETV Bharat / city

ಪೌರತ್ವ ತಿದ್ದುಪಡಿ ಕಾಯ್ದೆ ಪ್ರಶ್ನಿಸಿ ಹೈಕೋರ್ಟ್‌ಗೆ ಪಿಐಎಲ್.. - Citizenship Amendment Act

ಪೌರತ್ವ ತಿದ್ದುಪಡಿ ಕಾಯ್ದೆಯನ್ನು (2019) ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್ ಆರೀಫ್ ಜಮೀಲ್ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

PIL to the High Court the Citizenship Amendment Act
ಪೌರತ್ವ ತಿದ್ದುಪಡಿ ಕಾಯ್ದೆ ಪ್ರಶ್ನಿಸಿ ಹೈಕೋರ್ಟ್‌ಗೆ ಪಿಐಎಲ್

By

Published : Dec 16, 2019, 11:09 PM IST

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆಯನ್ನು (2019) ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್ ಆರೀಫ್ ಜಮೀಲ್ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ವಿಚಾರಣೆಗೆ ಅಂಗೀಕರಿಸುವಂತೆ ವಿಭಾಗಿಯ ಪೀಠ ಎದುರು ಮೆಮೋ ಸಲ್ಲಿಸಿದ್ದಾರೆ.

ಇದೇ ವಿಚಾರ ಸುಪ್ರೀಂಕೋರ್ಟ್​​​​ನಲ್ಲಿ ಕೆಲವರು ಅರ್ಜಿ ಸಲ್ಲಿಸಿರುವ ಕಾರಣ ನ್ಯಾಯಪೀಠ ತೆಗೆದುಕೊಳ್ಳುವ ನಿರ್ಧಾರದ ಮೇಲೆ ಈ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸುವುದಾಗಿ ನ್ಯಾಯಾಲಯವು ಅರ್ಜಿದಾರರಿಗೆ ಹೇಳಿ‌ ವಿಚಾರಣೆ‌ ಮುಂದೂಡಿದೆ.

ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಬಹಳಷ್ಟು ಗಲಭೆಗಳು ನಡೆಯುತ್ತಿವೆ. ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ. ಈ ಕಾಯ್ದೆ 2019ರ ಭಾಗ-ಬಿ ಇದರ ಕಲಂ2 (ಉಪಬಂಧ (1), 3 (ಕಲಂ 6ಬಿ), 4 (ತಿದ್ದುಪಡಿ ಕಲಂ-7ಡಿ), 5 (ತಿದ್ದುಪಡಿ ಕಲಂ-18) ಹಾಗೂ 6ನ್ನು ಸಂವಿಧಾನ ಬಾಹಿರ ಎಂದು ಘೋಷಿಸಬೇಕು. ಕಾಯ್ದೆ ಜಾರಿಗೆ ತಡೆ ನೀಡಬೇಕು ಎಂದು ಅರ್ಜಿದಾರರು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ABOUT THE AUTHOR

...view details