ಕರ್ನಾಟಕ

karnataka

ಬಿಎಂಟಿಸಿ ಟಿಕೆಟ್ ದರ ಹೆಚ್ಚಳ ಪ್ರಸ್ತಾಪ: ಸಿಎಂ ನಿರ್ಧಾರವೇ ಅಂತಿಮ ಎಂದ ಸವದಿ

By

Published : Feb 25, 2021, 2:20 PM IST

Updated : Feb 25, 2021, 4:17 PM IST

ಸುಮಾರು 18%ರಷ್ಟು ಟಿಕೆಟ್ ದರ ಹೆಚ್ಚಿಸುವಂತೆ ಬಿಎಂಟಿಸಿ ವತಿಯಿಂದ ಪ್ರಸ್ತಾಪ ಬಂದಿದೆ. ಆದರೆ ಅಷ್ಟು ದೊಡ್ಡ ಪ್ರಮಾಣದಲ್ಲಿ ಟಿಕೆಟ್ ದರ ಏರಿಕೆ ಮಾಡಲು ಸಾಧ್ಯವಿಲ್ಲ.‌ ಇದರಿಂದ ಸಾರ್ವಜನಿಕರಿಗೆ ಹೊರೆಯಾಗಲಿದೆ. ಹೀಗಾಗಿ ಸಾರ್ವಜನಿಕರಿಗೆ ಹೊರೆಯಾಗದಂತೆ ಟಿಕೆಟ್ ದರ ವೃದ್ಧಿಸುವ ಚಿಂತನೆ ಇದೆ ಎಂದರು.

plan to increase BMTC ticket price
ಬಿಎಂಟಿಸಿ ಟಿಕೆಟ್ ದರ ಹೆಚ್ಚಿಸುವ ಚಿಂತನೆ-ಸಿಎಂ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ: ಲಕ್ಷ್ಮಣ್ ಸವದಿ

ಬೆಂಗಳೂರು: ಬಿಎಂಟಿಸಿ ಟಿಕೆಟ್ ದರ ಹೆಚ್ಚಿಸುವ ಚಿಂತನೆ ಇದ್ದು, ಈ ಕುರಿತಂತೆ ಸಿಎಂ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಿಳಿಸಿದರು.

ಈಗಾಗಲೇ ಸಾರಿಗೆ ನಿಗಮಗಳ ಟಿಕೆಟ್ ದರವನ್ನು ಕಳೆದ ವರ್ಷ 12% ಹೆಚ್ಚಳ ಮಾಡಲಾಗಿದೆ. ಆದರೆ ಬಿಎಂಟಿಸಿ ಟಿಕೆಟ್ ದರವನ್ನು ಹೆಚ್ಚಳ ಮಾಡಿಲ್ಲ. ಹೀಗಾಗಿ ಬಿಎಂಟಿಸಿ ಟಿಕೆಟ್ ದರ ಹೆಚ್ಚಿಸುವ ಪ್ರಸ್ತಾಪ ಇದೆ ಎಂದು ತಿಳಿಸಿದರು.

ಸಾರಿಗೆ ಸಚಿವ ಲಕ್ಷ್ಮಣ್ ಸವದಿ

ಸುಮಾರು 18%ರಷ್ಟು ಟಿಕೆಟ್ ದರ ಹೆಚ್ಚಿಸುವಂತೆ ಬಿಎಂಟಿಸಿ ವತಿಯಿಂದ ಪ್ರಸ್ತಾಪ ಮಾಡಿದ್ದಾರೆ. ಆದರೆ ಅಷ್ಟು ದೊಡ್ಡ ಪ್ರಮಾಣದಲ್ಲಿ ಟಿಕೆಟ್ ದರ ಏರಿಕೆ ಮಾಡಲು ಸಾಧ್ಯವಿಲ್ಲ.‌ ಇದರಿಂದ ಸಾರ್ವಜನಿಕರಿಗೆ ಹೊರೆಯಾಗಲಿದೆ. ಹೀಗಾಗಿ ಸಾರ್ವಜನಿಕರಿಗೆ ಹೊರೆಯಾಗದಂತೆ ಟಿಕೆಟ್ ದರ ವೃದ್ಧಿಸುವ ಚಿಂತನೆ ಇದೆ ಎಂದರು.

ಈ ಸುದ್ದಿಯನ್ನೂ ಓದಿ:ದೇಶಾದ್ಯಂತ ನಾಳೆ ಲಾರಿ ಮುಷ್ಕರ: ಮೈಸೂರಿನಲ್ಲೂ ಬೆಂಬಲ

ಟಿಕೆಟ್ ದರ ಹೆಚ್ಚಳ ಸಂಬಂಧ ಸಿಎಂ ಜೊತೆ ಸಭೆ ನಡೆಸಿ, ನಿರ್ಧಾರ ಕೈಗೊಳ್ಳಲಾಗುತ್ತದೆ. ಮುಖ್ಯಮಂತ್ರಿ ಅವರು ಬಿಎಂಟಿಸಿ ಟಿಕೆಟ್ ದರ ಹೆಚ್ಚಿಸುವ ಸಂಬಂಧ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಟಿಕೆಟ್ ದರ ಹೆಚ್ಚಳ ಬೇಡ ಅಂದರೆ ಮಾಡುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

Last Updated : Feb 25, 2021, 4:17 PM IST

ABOUT THE AUTHOR

...view details