ಕರ್ನಾಟಕ

karnataka

ETV Bharat / city

ಎಚ್ಚರಿಕೆ ನೀಡಿದರೂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪ್ಲಾಸ್ಟಿಕ್​​​ ಬಳಕೆ: ದಂಡ ಹಾಕಿದ ಬಿಬಿಎಂಪಿ

ಪ್ಲಾಸ್ಟಿಕ್ ಬಳಕೆ ನಿಷೇಧ ಮಾಡಿದ್ರೂ ಇಂಡಿಯಾ-ಆಸ್ಟ್ರೇಲಿಯಾ ಕ್ರಿಕೆಟ್ ಪಂದ್ಯಾವಳಿ ವೇಳೆ ಸ್ಟೇಡಿಯಂನಲ್ಲಿ ಪ್ಲಾಸ್ಟಿಕ್ ಬಳಕೆ ಮಾಡಿದ್ದಕ್ಕೆ ಬಿಬಿಎಂಪಿ ಐವತ್ತು ಸಾವಿರ ರೂಪಾಯಿ ದಂಡ ವಿಧಿಸಿದೆ.

Kn_bng_01_bbmp_fine_7202707
ಹಲವು ಬಾರಿ ಎಚ್ಚರಿಕೆ ನೀಡಿದರೂ, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪ್ಲಾಸ್ಟಿಕ್ ಬಳಕೆ: ದಂಡ ಹಾಕಿದ ಬಿಬಿಎಂಪಿ

By

Published : Jan 21, 2020, 10:29 AM IST

ಬೆಂಗಳೂರು:ಪ್ಲಾಸ್ಟಿಕ್ ಬಳಕೆ ನಿಷೇಧ ಮಾಡಿದ್ರೂ ಇಂಡಿಯಾ-ಆಸ್ಟ್ರೇಲಿಯಾ ಕ್ರಿಕೆಟ್ ಪಂದ್ಯಾವಳಿ ವೇಳೆ ಸ್ಟೇಡಿಯಂನಲ್ಲಿ ಪ್ಲಾಸ್ಟಿಕ್ ಬಳಕೆ ಮಾಡಿದ್ದಕ್ಕೆ ಬಿಬಿಎಂಪಿ ಐವತ್ತು ಸಾವಿರ ರೂಪಾಯಿ ದಂಡ ವಿಧಿಸಿದೆ.

ಹಲವು ಬಾರಿ ಎಚ್ಚರಿಕೆ ನೀಡಿದರೂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪ್ಲಾಸ್ಟಿಕ್ ಬಳಕೆ: ದಂಡ ಹಾಕಿದ ಬಿಬಿಎಂಪಿ

ಜ. 19ರಂದು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ-ಭಾರತ ನಡುವೆ ಮೂರನೇ ಏಕದಿನ ಪಂದ್ಯ ನಡೆದಿತ್ತು. ಈ ವೇಳೆ ಪೂರ್ವ ವಲಯದ ಉಪ ಆರೋಗ್ಯಾಧಿಕಾರಿ ಪರಿಶೀಲನೆ ನಡೆಸಿದಾಗ ಪ್ಲಾಸ್ಟಿಕ್ ಕಪ್​ಗಳು, ಫ್ಲೆಕ್ಸ್, ಬ್ಯಾನರ್ ಬಳಸಿರುವುದು ಕಂಡುಬಂದಿದೆ. ಹೀಗಾಗಿ ಕ್ರೀಡಾಂಗಣದ ಆಡಳಿತ ಮಂಡಳಿ ಕೆಎಸ್ಸಿಎ (ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಷನ್)ಗೆ ಐವತ್ತು ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಬಿ.ಹೆಚ್.ಅನಿಲ್ ಕುಮಾರ್ ತಮ್ಮ ಟ್ವಿಟರ್ ಖಾತೆಯಲ್ಲಿ ಟ್ವೀಟ್​ ಮಾಡಿದ್ದಾರೆ. ಸಾಕಷ್ಟು ಬಾರಿ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಅರಿವು ಮೂಡಿಸಿದರೂ ಮತ್ತೆ ಪ್ಲಾಸ್ಟಿಕ್ ಬಳಸಿದ್ದಕ್ಕೆ ದಂಡ ವಿಧಿಸಲಾಗಿದೆ ಎಂದಿದ್ದಾರೆ.

ABOUT THE AUTHOR

...view details